ಸಿಂಧನೂರು: ಕರೊನಾ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿಯಮಗಳು ಜಾರಿಗೆ ಮಾಡಿದ್ದು, ನಿಯಮಗಳನ್ನು ಪಾಲನೆ ಮಾಡುವಂತೆ ಸಾರ್ವಜನಿಕರಿಗೆ ನಗರಸಭೆ ಪರಿಸರ ಅಭಿಯಂತರರಾದ ಮಹೇಶ್ವರ ಕೊಡಬಾಳ ಜನರಲ್ಲಿ ಮನವಿ ಮಾಡಿದರು. ಒಂದು ವೇಳೆ ಕರೋನಾ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.