ನವದೆಹಲಿ: ವಂಚನೆ ಆರೋಪ ಎದುರಿಸುತ್ತಿರುವ ನ್ಯಾಷನಲ್ ಸ್ಟಾಕ್ ಎಕ್ಸ್ ಚೇಂಚ್ ನ ಮಾಜಿ ಎಂ ಡಿ ಹಾಗೂ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಬಂಧಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ಸಂಭವಿಸಿದೆ. ಚಿತ್ರಾ ರಾಮಕೃಷ್ಣ ಅವರು ಎನ್ ಎಸ್ ಇ ಸೂಕ್ಷ್ಮ ಮಾಹಿತಿಗಳನ್ನು ಅಪರಿಚಿತರ ಜತೆ ಹಂಚಿಕೊಂಡಿದ್ದಾರೆ ಎಂಬ ಆರೋಪಕ್ಕೆ ಕೂಡ ಗುರಿಯಾಗಿದ್ದಾರೆ.
ಹಿಮಾಲಯದ ತಪ್ಪಲಿನಲ್ಲಿರುವ ನಿಗೂಢ ಯೋಗಿಯ ಮಾರ್ಗದರ್ಶನ ಕೂಡ ಪಡೆಯುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು.