ರೇಸ್ ಕೋರ್ಸ್ ಮೇಲೆ ಸಿಸಿಬಿ ದಾಳಿ ..!
Voice OfJanata: Editor : ರೇಸ್ ಕೋರ್ಸ್ ಮೇಲೆ ಸಿಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಕಮಿಷನರ್ ಬಿ.ದಯಾನಂದ್ ಮಾಹಿತಿ ನೀಡಿದ್ದು, ಅಧಿಕೃತ, ಅನಧಿಕೃತ ಬೆಟ್ಟಿಂಗ್ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಬುಕ್ಕಿಂಗ್ ಕೌಂಟರ್ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ದಾಳಿ ವೇಳೆ ಯಾವುದೇ ರಶೀದಿ, ದಾಖಲೆಗಳು ಇಲ್ಲದೇ ಹಣದ ವ್ಯವಹಾರ ನಡೆಯುತ್ತಿರುವುದು ತಿಳಿದುಬಂದಿದೆ. 3.45 ಕೋಟಿ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.
ಅಕ್ರಮ ಬೆಟ್ಟಿಂಗ್ನಿಂದ ಶೇ.28ರಷ್ಟು ಜಿಎಸ್ಟಿ ತೆರಿಗೆ ವಂಚನೆ ಆಗಿದೆ. ಅನಧಿಕೃತ ವ್ಯಕ್ತಿಗಳು ಕೌಂಟರ್ ನಡೆಸುತ್ತಿದ್ದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಸಿಸಿಬಿ ವಿಶೇಷ ತಂಡ ದಾಳಿ ನಡೆಸಿತ್ತು. ಪ್ರಕರಣ ಸಂಬಂಧ 66 ಜನರಿಂದ ಮಾಹಿತಿ ಪಡೆದು ಐಪಿಸಿ ಸೆಕ್ಷನ್ 41 ಅಡಿ ನೋಟಿಸ್ ನೀಡಲಾಗಿದೆ. ತನಿಖೆ ಮುಂದುವರೆದಿದೆ ಎಂದು ತಿಳಿಸಿದರು.