ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಗೌರಿ ಗಣೇಶ ಹಾಗೂ ಈದ ಮಿಲಾದ ಹಬ್ಬ ಆಚರಿಸಿ: ಡಿಸಿ ಭೂಬಾಲನ್
ವಿಜಯಪುರ : ಜಿಲ್ಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷ ಸೆ.೭ರಂದು ಗಣೇಶ ಚರ್ತುರ್ಥಿ ಹಾಗೂ ಸೆ.೧೬ರಂದು ಈದ್‌ಮಿಲಾದ್ ಹಬ್ಬವನ್ನು ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಸೌಹಾರ್ದಯುತವಾಗಿ ಹಬ್ಬಗಳ ಆಚರಣೆಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗಣೇಶ ಹಬ್ಬ ಹಾಗೂ ಈದ್-ಮಿಲಾದ್ ಹಬ್ಬದ ಅಂಗವಾಗಿ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಲು ಜಿಲ್ಲಾಡಳಿತ ಏಕ ಗವಾಕ್ಷಿ ಪದ್ದತಿಯನ್ನು ಜಾರಿಗೆ ತಂದಿದ್ದು ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಕಡ್ಡಾಯವಾಗಿ ಅನುಮತಿ ಪಡೆಯಬೇಕು ಈ ಹಬ್ಬಗಳು ಬಾರತೀಯ ಸಂಸ್ಕೃತಿ ಬಿಂಬಿಸುವ ಹಬ್ಬಗಳಾಗಿವೆ ಸ್ನೇಹ ಸೌಹಾರ್ದೆತೆಗೆ ಇಂತಹ ಹಬ್ಬಗಳು ಆಚರಿಸುವುದು ರೂಡಿಯಲ್ಲಿವೆ. ಮೂರ್ತಿಗಳನ್ನು ಪ್ರತಿಷ್ಟಾಪಿಲು ನಗರದಲ್ಲಿ ಗಾಂಧಿ ಚೌಕ ಹಾಗೂ ಆದರ್ಶನಗರದ ಪೊಲೀಸ್ ಠಾಣೆಗಳಲ್ಲಿ ಏಕ ಗವಾಕ್ಷಿ ಕೌಂಟರನ್ನು ತೆರೆಯಲು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.
ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಅಗತ್ಯವಾದ ವಿದ್ಯುತ್, ಬ್ಯಾನರ್, ಸೌಂಡ್ ಹಾಗೂ ಪಠಾಕಿಗಳನ್ನು ಹಾರಿಸಲು ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಪಠಾಕಿಗಳನ್ನು ನಿಗದಿ ಪಡಿಸಿದ ಸ್ಥಳಗಳಲ್ಲಿ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಇತರೆಡೆ ಮಾರಲು ಅವಕಾಶ ಇರುವುದಿಲ್ಲ, ಮೂರ್ತಿಗಳನ್ನು ಪ್ರತಿಷ್ಟಾಪಿಸಿದ ದಿನಗಳಲ್ಲಿ ಶಾಂತಿ ಹಾಗೂ ಸುವ್ಯವಸ್ಥ ಕಾಪಾಡಿಕೊಂಡು ಬರಲು ಪ್ರತಿ ಮೂರ್ತಿಗಳಲ್ಲಿ ತಮ್ಮ ತಮ್ಮ ಪ್ರತಿನಿಧಿಗಳನ್ನು ದಿನದ ೨೪ ತಾಸು ಉಪಸ್ಥಿತರಿರುವಂತೆ ನೋಡಿಕೊಳ್ಳಬೇಕು. ಗಣೇಶ ಮೂರ್ತಿಗಳನ್ನು ಸ್ಥಾಪಿಸುವಾಗ ಸಾರ್ವಜನಿಕರಿಗೆ, ವಾಹನ ಸವಾರರಿಗೆ, ತೊಂದರೆಯಾಗದAತೆ ನೋಡಿಕೊಳ್ಳಬೇಕು. ಧ್ವನಿ ವರ್ಧಕಗಳಿಂದ ವಯೋವೃದ್ಧ ಹಾಗೂ ಹೃದಯ ಸಂಬAಧಿ ಖಾಯಿಲೆಗಳಿದ್ದಲ್ಲಿ ತೊಂದರೆಯಾಗದAತೆ ನಿಗದಿತ ಧ್ವನಿ ವರ್ಧಕಗಳನ್ನು ಮಾತ್ರ ಬಳಸಬೇಕು. ರಾತ್ರಿ ೧೦ ಗಂಟೆಯಿAದ ಬೆಳಿಗ್ಗೆ ೬ ಗಂಟೆಯವರೆಗೆ ಯಾವುದೇ ರೀತಿಯ ಧ್ವನಿವರ್ದಕಗಳನ್ನು ಬಳಸುವಂತಿಲ್ಲ ಪರಿಸರ ಸ್ನೇಹಿ ಮೂರ್ತಿಗಳನ್ನು ಸ್ಥಾಪಿಸುವಂತೆ ತಿಳಿಸಿದ ಅವರು ಎಲ್ಲರೂ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದರು.
ವಿಸರ್ಜನೆಗೆ ಪ್ರತಿ ವರ್ಷದಂತೆ ತಾಜ್ ಬೌಡಿ ಹಾಗೂ ಕೆ.ಎಸ್.ಆರ್.ಟಿ ಡಿಪೋಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು ವಿಸರ್ಜನೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮಹಾನಗರ ಪಾಲಿಕೆಗೆ ಸೂಚನೆ ನೀಡಲಾಗಿದೆ. ಗಣೇಶ ವಿಸರ್ಜನೆ ದಿನಗಳಂದು ಇಲ್ಲವೆ ಮುಂಚಿನ ದಿನದಂದು ಮದ್ಯ ಮಾರಾಟ ನಿಷೇದಿಸಲು ಹಾಗೂ ಕಟ್ಟು ನಿಟ್ಟಿನ ಮದ್ಯಮಾರಾಟ ಕ್ರಮ ವಹಿಸುವಂತೆ ಅಬಕಾರಿ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಸಭೆಗೆ ತಿಳಿಸಲಾಯಿತು.
ಹಬ್ಬಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಹಬ್ಬಗಳ ಆಚರಣೆಗೆ ಎಲ್ಲ ಸಮುದಾಯ-ಸಂಘ ಸಂಸ್ಥೆಗಳು ಅಗತ್ಯ ಸಹಕಾರ ಒದಗಿಸಬೇಕು. ಜಿಲ್ಲಾಡಳಿತವೂ ಸಹ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಈ ವರ್ಷವೂ ಕೂಡ ವಿಜ್ರಂಭಣೆಯಿAದ ಎರಡು ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಣೆಗೆ ಸಹಕರಿಸಲಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಮಾತನಾಡಿ, ಹಬ್ಬದ ಸಂದರ್ಭಗಳಲ್ಲಿ ಯಾವುದೇ ತೊಂದರೆಯಾಗದAತೆ ಪೊಲೀಸ್ ಇಲಾಖೆಯಿಂದ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಲಾಗುತ್ತದೆ. ಹಬ್ಬದ ಸಂದರ್ಭದಲ್ಲಿ ಸೌಹಾರ್ದತೆ, ಶಾಂತಿ ಕಾಪಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡರು.
ಸಭೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಾದ ಜಗದೀಶ ಇನಾಂದಾರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮಕ್ಕಳಕಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅರವಿಂದ ಕುಲಕರ್ಣಿ, ರಾಹುಲ್ ಜಾಧವ, ಪ್ರೇಮಾನಂದ ಬಿರಾದಾರ, ಶಿವರುದ್ರ ಬಾಗಲಕೋಟ, ಅಬ್ದುಲರಜಾಕ ಹೊರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.