ಗುಮ್ಮಟ ನಗರಿ ಖಡಕ್ ಜಿಲ್ಲಾ ಪಂಚಾಯತ್ ಅಧಿಕಾರಿ ರಾಹುಲ್ ಶಿಂಧೆ ವರ್ಗಾವಣೆ..
ವಿಜಯಪುರ : ವಿಜಯಪುರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಇಂಡಿ ಉಪವಿಭಾಗ ಅಧಿಕಾರಿಯಾಗಿರುವ ಇವರು, ಕೋವಿಡ್ ವೇಳೆಯಲ್ಲಿ ತಮ್ಮ ಜೀವದ ಹಂಗು ತೊರೆದು ಜನತೆಯ ಆರೋಗ್ಯಕ್ಕಾಗಿ ಸೇವೆ ಮಾಡಿದ್ದಾರೆ. ಇನ್ನೂ ವಿಜಯಪುರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಪಂಚಾಯತ್ ಸಿಬ್ಬಂದಿಗೆ ಕ್ರೀಡಾ ಚಟುವಟಿಕೆ ಅತೀ ಹೆಚ್ಚು ಒತ್ತು ನೀಡಿ ಅತ್ಯುತ್ತಮ ಸೇವೆ ಗೈದಿದ್ದಾರೆ. ಒಟ್ಟಾರೆಯಾಗಿ ಕಳೆದ ಹಲವು ವರ್ಷಗಳಿಂದ ರಾಹುಲ್ ಶಿಂದೆ ಅವರು ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಈಗ ಅವರನ್ನು ರಾಜ್ಯ ಸರಕಾರ ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಗೊಳಿಸಿದೆ.