ಚೆಕ್ ಪೋಸ್ಟ್ ಗೆ ಅನೀರಿಕ್ಷಿತ ಭೇಟಿ ನೀಡಿದ ಸಿಇಓ
ಬೆಳಗಾವಿ : ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಹುಕ್ಕೇರಿ ತಾಲೂಕಿನ ದಡ್ಡಿ ಕ್ರಾಸ್ ಬಳಿ ಸ್ಥಾಪಿಸಿರುವ ಚೆಕ್ ಪೋಸ್ಟ್ಗೆ ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯೂ ಆದ ಚಿಕ್ಕೋಡಿ ಲೋಕಸಭೆ ಕ್ಷೇತ್ರ ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರು ಸೋಮವಾರ ದಿಡೀರ್ ಭೇಟಿ ನೀಡಿ ಪರಿಶೀಲಿಸಿದರು.
ಅನೀರಿಕ್ಷಿತ ಭೇಟಿ ನೀಡಿದ ರಾಹುಲ್ ಶಿಂಧೆ ಅವರು, ಈ ಮಾರ್ಗದ ಮೂಲಕ ಸಾಗಿ ಹೋಗಿರುವ ವಾಹನಗಳ ಪಟ್ಟಿ, ಚೆಕ್ ಪೋಸ್ಟ್ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ ಎಲ್ಲ ವಾಹನಗಳನ್ನು ಕಡ್ಡಾಯವಾಗಿ ತಪಾಸಿಸುವಂತೆ ಸೂಚಿಸಿದರು. ಹಣ, ಹೆಂಡಸೇರಿದಂತೆ ಮತದಾರರಿಗೆ ಆಮಿಷವೊಡ್ಡುವ ವಸ್ತುಗಳ ಸಾಗಾಟ ಮತ್ತು ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸಬೇಕು ಸೂಚಿಸಿದರು.
ಸಹಾಯಕ ನಿರ್ದೇಶಕರಾದ ಪಿ.ಲಕ್ಷ್ಮೀನಾರಾಯಣ, ರಾಜು ಢಾಂಗೆ, ಪಿಡಿಓ ಮಹಾದೇವ ಪೂಜೇರಿ, ಮಹಾಂತೇಶ ಬಾದವಾನಮಠ, ಪೊಲೀಸ್ ಮತ್ತು ಅಬಕಾರಿ ಸಿಬ್ಬಂದಿಗಳು ಉಪಸ್ಥಿತರಿದರು.