40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಬೀದರ್ ಜಿಲ್ಲೆಯಲ್ಲಿ ಮಾರ್ಚ್‌ನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಂಘಟಿಸುವ 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಗುರುವಾರ ಅನಾವರಣ ಮಾಡಿದರು.
ಈ ಸಂದರ್ಭದಲ್ಲಿ ಅರಣ್ಯ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಈಶ್ವರ ಬಿ ಖಂಡ್ರೆ ಅವರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಮ್ಮೇಳನಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಚ್.ಬಿ.ಮದನಗೌಡ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಬಾಬುವಾಲಿ, ಶಿವಕುಮಾರಸ್ವಾಮಿ, ಪೃಥ್ವಿ ಮತ್ತಿತರರು ಪಾಲ್ಗೊಂಡಿದ್ದರು
——-
ಅರ್ಥಪೂರ್ಣ ಸಮ್ಮೇಳನವಾಗಿಸಲು ಶ್ರಮಿಸಿ: ಈಶ್ವರ ಖಂಡ್ರೆ ಕರೆ
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಸಚಿವ ಈಶ್ವರ ಖಂಡ್ರೆ ಅವರು ಮತ್ತೊಮ್ಮೆ ಬಿಡುಗಡೆ ಮಾಡಿ, ಬೀದರ್ ಜಿಲ್ಲಾ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಸಿದ್ದೂಪಾಟೀಲ್ ಸಮ್ಮುಖದಲ್ಲಿ ರಾಜ್ಯ ಸಂಘಕ್ಕೆ ಹಸ್ತಾಂತರಿಸಿದರು. ಎರಡು ದಶಕಗಳ ಬಳಿಕ ಬೀದರ್‌ನಲ್ಲಿ ನಡೆಯುತ್ತಿರುವ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣ ಸಮ್ಮೇಳನವಾಗಿಸಲು ಶ್ರಮಿಸುವಂತೆ ಸಚಿವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಬಾಬುವಾಲಿ, ಶಿವಕುಮಾರಸ್ವಾಮಿ, ದೀಪಕ್ ವಾಲಿ, ಮಾಳಪ್ಪ ಅಡಸಾರೆ, ಸಿದ್ರಾಮಯ್ಯ ಸ್ವಾಮಿ, ಪೃಥ್ವಿರಾಜ್, ಬಸವರಾಜ ಪವಾರ್, ವಿಜಯಕುಮಾರ ಅಷ್ಟುರೆ ಮತ್ತಿತರರು ಪಾಲ್ಗೊಂಡಿದ್ದರು



















