ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಜಿಲ್ಲೆಗೆ ಆಗಮನ
ವಿಜಯಪುರ, ಜೂನ್ 14 : ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಜೂ.16 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜೂ.16ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಿ, 10-50ಕ್ಕೆ ಬಳ್ಳಾರಿ ಜಿಲ್ಲೆ ತೋರಣಗಲ್ಲು ಏರಸ್ಟ್ರಿಪ್‌ಗೆ ಆಗಮಿಸಿ 10-55ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 12-10ಕ್ಕೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದ ಹೆಲಿಪ್ಯಾಡ್‌ಗೆ ಆಗಮಿಸಿ, ಇಂಚಗೇರಿ ಮಠದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪುಷ್ಪಾರ್ಚನೆ ಕಾರ್ಯಕ್ರಮ ಹಾಗೂ ನಿಜರಾಜಯೋಗಿ ಶ್ರೀ ಸಮರ್ಥ ಸದ್ಗುರು ಶ್ರೀ ಮಾಧವಾನಂದ ಪ್ರಭುಗಳ ದೇವಸ್ಥಾನ ಲೋಕಾರ್ಪಣೆ, ಕಳಸಾರೋಹಣ ಮತ್ತು 44ನೇ ಪುಣ್ಯತಿಥಿ ಸಪ್ತಾಹದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಂಚಗೇರಿ ಹೆಲಿಪ್ಯಾಡ್‌ದಿಂದ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



















