ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರ ಜಿಲ್ಲಾ ಪ್ರವಾಸ
ವಿಜಯಪುರ: ಜ.7 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರು 9ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ 10ಗಂಟೆಗೆ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು,ತೋರಣಗಲ್ ಜಿಂದಾಲ್ ಏರಸ್ಕ್ರಿಪ್ಟ್ ಆಗಮಿಸಿ, ಅಲ್ಲಿಂದ 11 ಗಂಟೆಗೆ ಹೊರಟು, ಬೆಳಿಗ್ಗೆ 11:45 ಕ್ಕೆ ನಗರದ ಸೈನಿಕ ಶಾಲೆಯ ಆವರಣದ ಹೆಲಿಪ್ಯಾಡಿಗೆ ಆಗಮಿಸಲಿದ್ದಾರೆ.
ಅಂದು ಮಧ್ಯಾಹ್ನ 12ಕ್ಕೆ ನಗರದ ಬಸ್ ನಿಲ್ದಾಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿ ಅನಾವರಣಗೊಳಿಸುವರು. ಮಧ್ಯಾಹ್ನ 12-30ಕ್ಕೆ ಬೂತನಾಳ ಗ್ರಾಮದ ಹತ್ತಿರವಿರುವ ನೂತನವಾಗಿ ನಿರ್ಮಿಸಲಾದ ಸೈಕ್ಲಿಂಗ್ ವೇಲೋಡ್ರೋಮ್ ಉದ್ಘಾಟಿಸಿ, ನಂತರ ಮಧ್ಯಾಹ್ನ 1 ಗಂಟೆಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ವತಿಯಿಂದ ನಗರದ ವ್ಹಿ.ಬಿ. ದರ್ಬಾರ ಶಾಲೆಯ ಆವರಣದಲ್ಲಿ ಆಯೋಜಿಸಿದ ಜಿಲ್ಲೆಯ ವಿವಿಧ ಯೋಜನೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 4 ಗಂಟೆಗೆ ಸೈನಿಕ ಸ್ಕೂಲ್ ಆವರಣದ ಹೆಲಿಪ್ಯಾಡ್‌ನಿಂದ ಹೆಲಿಕ್ಯಾಪ್ಟರ್ ಮೂಲಕ ಬಳ್ಳಾರಿ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


















