ವಿಜಯಪುರ : ಜಿಲ್ಲಾಡಳಿತ ವತಿಯಿಂದ ಐತಿಹಾಸಿಕ ಸ್ಮಾರಕಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಅಂಗವಾಗಿ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ನಗರದ ಕರಿಮುದ್ದಿನ್ ಮಸೀದಿ, ಕೋಟೆ ಗೋಡೆ ಆವರಣ ಹಾಗೂ ಇತರೆ ಸ್ಮಾರಕಗಳಿಗೆ ಭೇಟಿ ನೀಡಿದರು.
ವಿಜಯಪುರ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಇನ್ನು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿಯಿಂದ ಡಿಸಿ ಮಾಹಿತಿ ಕಲೆ ಹಾಕಿದರು. ಅಲ್ಲದೇ, ಆದಷ್ಟು ಬೇಗನೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಖಡಕ್ ಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.