ಬೆಂಗಳೂರು : ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇಂದಿಗೆ 6 ತಿಂಗಳು ಪೂರೈಸಿದ ಹಿನ್ನಲೆ ಹಾಗೂ ಅವರ ಹುಟ್ಟು ಹಬ್ಬದ ದಿನವಾದ ಇಂದು ಬೊಮ್ಮಾಯಿಯವರಿಗೆ ರಾಷ್ಟ್ರಪತಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಕರೆ ಮಾಡಿ ಶುಭ ಹಾರೈಸಿದ್ದಾರೆ ಎಂದು ಸಿಎಂ ಹೇಳಿದರು. ಇನ್ನು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.