ವಿಜಯಪುರ: ಮೇ 10ಕ್ಕೆ ಸಿಎಂ ಬದಲಾವಣೆ ಆಗಬಹುದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದರು. ನಗರದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆಗೆ ರಾಷ್ಟ್ರೀಯ ನಾಯಕರು ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಆಗುತ್ತದೆ. ಅಂತಿಮ ತೀರ್ಮಾನ ಪ್ರಧಾನಿ ಮೋದಿ ಮಾಡ್ತಾರೆ. ಅಲ್ಲದೇ, ಕರ್ನಾಟಕ ಹಾಗೂ ಪಾರ್ಟಿ ಹಿತದೃಷ್ಟಿಯಿಂದ ಒಳ್ಳೆಯ ನಿರ್ಣಯ ಆಗುತ್ತದೆ.