VOJ ನ್ಯೂಸ್ ಡೆಸ್ಕ್: ಇಂದು ಬೆಳಿಗ್ಗೆ ವಿಧಾನಸೌಧದಲ್ಲಿರುವ ವಿಧಾನ ಪರಿಷತ್ ಸಭಾಪತಿಗಳಿಗೆ ಸಿ.ಎಂ ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ. ಕೆಲ ದಿನಗಳ ಹಿಂದೆ ಸಿಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ಪತ್ರಿಕಾಗೋಷ್ಟಿಯಲ್ಲಿ ಸಿ.ಎಂ.ಇಬ್ರಾಹಿಂ ಮಾತನಾಡಿ ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯಗೆ ಕಳುಹಿಸುತ್ತೇನೆ ಎಂದು ತಿಳಿಸಿದ್ದರು. ಸ್ವಾಭಿಮಾನ ಹಾಗೂ ರಾಜ್ಯದ ಹಿತ ದೃಷ್ಡಿಯಿಂದ ಈ ರಾಜೀನಾಮೆ ಕೊಡುತ್ತಿದ್ದೇನೆ. ಕಾಂಗ್ರೆಸ್ನಲ್ಲಿ ಇರಲು ಸಾಧ್ಯವಿಲ್ಲ. ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದೆ. ಇದಕ್ಕೆ ಐದು ರಾಜ್ಯಗಳ ಚುನಾವಣೆಯೇ ಸಾಕ್ಷಿಯಾಗಿದೆ ಎಂದರು.
ಅಲ್ಲದೇ ಎಚ್. ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿಯವರ ಜೊತೆ ಕುಳಿತು ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದಿದ್ದಾರೆ.