ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಅದ್ದೂರಿ ಸ್ವಾಗತ ಹಾಗೂ ಸನ್ಮಾನ..
ಹನೂರು : ತಾಲೂಕಿನ ಪ್ರಸಿದ್ಧ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹನೂರು ಪಟ್ಟಣದಲ್ಲಿ ಮಾಜಿ ಶಾಸಕ ನರೇಂದ್ರ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಪಟ್ಟಣದ ಕಾಂಗ್ರೆಸ್ ಕಚೇರಿ ಸಮೀಪ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ವಾದ್ಯ ಮೇಳ ತಮಟೆ ಮೇಳಗಳೊಂದಿಗೆ ಸಂಭ್ರಮದಿಂದ ಸ್ವಾಗತಿಸಲಾಯಿತು ಮುಖಂಡರು ಜೈಕಾರ ಮೊಳಗಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜ ಕಲ್ಯಾಣ ಸಚಿವ ಎಸ್ ಸಿ ಮಹದೇವಪ್ಪ. ಪಶು ಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ವೆಂಕಟೇಶ್ ಅವರಿಗೆ ಪೀಠ ತೊಡಿಸಿ ಹಾರ ತುರಾಯಿ ಹಾಕಿ ಸನ್ಮಾನಿಸಲಾಯಿತು.
ಟಿವಿಎಸ್ ಶೋರೂಮ್ ಉದ್ಘಾಟನೆ : ಪಟ್ಟಣದ ಕಾಂಗ್ರೆಸ್ ಕಚೇರಿ ಸಭೆಯಲ್ಲಿ ಸಿಎಂ ಅವರ ಅಭಿಮಾನಿ ಭಾಷಾ ಅವರು ನೂತನವಾಗಿ ತೆರೆದಿರುವ ಟಿವಿಎಸ್ ಮೋಟಾರ್ ಬೈಕ್ ಶೋರೂಮ್ ಅನ್ನು ಬಟನ್ ಒತ್ತುವ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿದರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖಂಡರು ಹಾಗೂ ಕಾರ್ಯಕರ್ತರು ಹಾರ ಹಾಕಿ ಸನ್ಮಾನಿಸಿದರು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಲು ಕಾರು ಹತ್ತುತ್ತಿದ್ದಂತೆ ಕಾರಿನ ಮೇಲೆ ನಿಂತು ಅಭಿಮಾನಿಗಳತ್ತ ಕೈಬೀಸಿದರು.
ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..