ವಿಜಯಪುರ: ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ಬೈಕ್ ಸವಾರಿಬ್ಬರು ಅಸುನೀಗಿರುವ ಘಟನೆ ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ವೈನ್ ಫ್ಯಾಕ್ಟರಿ ಬಳಿ ನಡೆದಿದೆ. ಮೃತಪಟ್ಟಿರುವ ಬೈಕ್ ಸವಾರನ ಹೆಸರು ತಿಳಿದುಬಂದಿಲ್ಲ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನು ಈ ವೇಳೆಯಲ್ಲಿ ಚಡಚಣಗೆ ಹೋಗುತ್ತಿದ್ದ ಶಾಸಕ ದೇವಾನಂದ್ ಚವ್ಹಾಣ ಗಾಯಗೊಂಡಿರುವ ಸವಾರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ