ವಿಜಯಪುರ: ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ಪಟ್ಟಣದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಮನಗೂಳಿ ಗ್ರಾಮದ ರಾಮನಗೌಡ ಶಂಕ್ರಪ್ಪ ಆಲಗೊಂಡ್ (70) ಮೃತಪಟ್ಟಿರುವ ದುರ್ದೈವಿ. ಅಪಘಾತಕ್ಕೆ ಅತೀ ವೇಗವೆ ಕಾರಣವೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.