ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಆಲಗೂರ ನಾಮಪತ್ರ ಸಲ್ಲಿಕೆ
ವಿಜಯಪುರ: ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ನಗರದ ಸಿದ್ದೇಶ್ವರ ಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ತೆರದ ವಾಹನದಲ್ಲಿ ಬೃಹತ್ ಮೆರವಣಿಗೆ ಮಾಡಿ ಶಕ್ತಿ ಪ್ರದರ್ಶನ ಮಾಡಿದರು.
ಬಿಸಿಲಿನ ಅಬ್ಬರದ ನಡುವೆಯು ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರು, ಸಚಿವರು, ಶಾಸಕರು, ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡು, ಒಗ್ಗಟ್ಟು ಪ್ರದರ್ಶಿಸುವ ಮೂಲಕ ಚುನಾವಣೆ ಕಾವು ಹೆಚ್ಚಿಸಿದರು.
ತದನನಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ಜಿಲ್ಲಾ ಚುನಾವಣಾಧಿಕಾರಿ ಟಿ. ಭೂಬಾಲನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಸಕ್ಕರೆ ಸಚಿವ ಶಿವಾನಂದ ಎಸ್. ಪಾಟೀಲ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ಮತ್ತು ಮುದ್ದೇಬಿಹಾಳ ಶಾಸಕ ಸಿ. ಎಸ್. ನಾಡಗೌಡ, ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ, ಉಪಸ್ಥಿತರಿದ್ದರು.
ಎರಡನೇ ಸೆಟ್ ನಲ್ಲಿ ನಾಮಪತ್ರ
ಸಲ್ಲಿಸುವ ವೇಳೆ ನಾಗಠಾಣ ಶಾಸಕ ವಿಠಲ ಧೋಂಡಿಬಾ ಕಟಕದೊಂಡ, ಅಶೋಕ ನ್ಯಾಮಗೊಂಡ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರಿಫ್, ಪೂಜಾರಿ ಉಪಸ್ಥಿತರಿದ್ದರು.