ಅ 6 ರಂದು ಮೈತ್ರಿ ಪಕ್ಷದ ವಿರುದ್ಧ ಕಾಂಗ್ರಸ್ ಬೃಹತ್ ಪ್ರತಿಭಟನೆ : ಅಧ್ಯಕ್ಷ ಜಾವೀದ್ ಮೋಮಿನ್
ಇಂಡಿ : ಜೆಡಿಎಸ್, ಬಿಜೆಪಿ ಮೈತ್ರಿ ಪಕ್ಷದ ವಿರುದ್ಧ ಬೃಹತ್ ಪ್ರತಿಭಟನೆ ವಿಜಯಪುರ ನಗರದಲ್ಲಿ ಅ- 6 ಬೆಳಿಗ್ಗೆ 10 ಘಂಟೆಗೆ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಇಂಡಿ ಮತಕ್ಷೇತ್ರದ ಕಾರ್ಯಕರ್ತರು ಹಾಗೂ ಮುಖಂಡರು ಪಾಲ್ಗೊಳ್ಳಲು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವೀದ ಮೋಮಿನ ಪತ್ರಿಕೆ ಪ್ರಕಟಣೆ ಮೂಲಕ ಕರೆ ನೀಡಿದ್ದಾರೆ.
ಸಿ ಎಮ್ ಸಿದ್ದರಾಮಯ್ಯ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಷಡ್ಯಂತ್ರ ಶಕ್ತಿಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಅ-6 ರಂದು ಬೆಳಿಗ್ಗೆ 10 ಘಂಟೆಗೆ ಸಿದ್ದೇಶ್ವರ ದೇವಸ್ಥಾನದಿಂದ, ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ ಮಾರ್ಗವಾಗಿ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯದವರೆಗೆ ಪ್ರತಿಭಟನೆ ನಡೆಯುತ್ತದೆ. ಹಾಗಾಗಿ ಇಂಡಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಿ ಎಮ್ ಸಿದ್ದರಾಮಯ್ಯ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆ ಪಾಲ್ಗೊಳ್ಳಲು ಮನವಿ ಮಾಡಿದ್ದಾರೆ.