ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಅರ್ಜಿಗೆ ಸಲ್ಲಿಕೆ ಜೂನ್ 25 ವರಿಗೆ ಮುಂದುವರಿದಿದೆ
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಕೆಗೆ ಜೂ-25 ವರೆಗೆ ಮುಂದುವರಿಕೆ
ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: 2025-26ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ 15 -6-2025 ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ.
ಕೆಲವು ತಾಂತ್ರಿಕ ಸಮಸ್ಯೆಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲವೆಂದು, ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆಯ ದಿನಾಂಕ:25.06.2025 ರವರೆಗೆ ವಿಸ್ತರಿಸಲಾಗಿದ್ದು ಎಲ್ಲಾ ಸರ್ಕಾರದ ಕಛೇರಿಗಳು ಮತ್ತು ಶಾಲೆಗಳಯಲ್ಲಿ ನಾಮಫಲಕಗಳಲ್ಲಿ ಪ್ರಕಟಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶಿವಲೀಲಾ ಕೊಣ್ಣೂರ, ಅವರು ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.