ಇಂಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಓರ್ವನ ಮೇಲೆ ಹಲ್ಲೆ..!
ಇಂಡಿ : ಕ್ಷುಲ್ಲಕ ಕಾರಣಕ್ಕೆ ಓರ್ವನ ಮೇಲೆ ಕಿಡಿಗೇಡಿಗಳು ಹಲ್ಲೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಇಂಗಳಗಿ ಗ್ರಾಮದ ರಸ್ತೆಯಲ್ಲಿ ಮಂಗಳವಾರ ನಡೆದಿದೆ.
ಶಿವಾನಂದ ಮಲಕಗೊಂಡ ಹಲ್ಲೆಗೊಳಗಾದ ವ್ಯಕ್ತಿ. ಇನ್ನೂ ಗ್ರೀನ್ ಗಾರ್ಡನ್ ಹೋಟೆಲ್‌ನಲ್ಲಿ ಊಟದ ನಂತರ ಬಿಲ್ ಕೊಡುವ ವೇಳೆ ಕಿಡಿಗೇಡಿಗಳು ಏಕಾಏಕಿ ಹಲ್ಲೆಗೈದು ಪರಾರಿಯಾಗಿದ್ದಾರೆ. ಅಲ್ಲದೇ, ಶಿವಾನಂದ ಬಳಿಯಿದ್ದ ಚಿನ್ನ, ನಗದು ದೋಚಿಕೊಂಡು ಎಸ್ಕೇಪ್ ಆಗಿದ್ದಾರೆ ಎಂದು ಹಲ್ಲೆಗೊಳಗಾದ ಶಿವಾನಂದ ಆರೋಪಿಸಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.