ವಿಜಯಪುರ : ಬಾವಿಯಲ್ಲಿ ಬಿದ್ದು ಯುವತಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ತೆಲಗಿ ಗ್ರಾಮದಲ್ಲಿ ನಡೆದಿದೆ. 26 ವರ್ಷದ ಯುವತಿ ಸುನೀತಾ ವಾಲೀಕಾರ್ ಎಂದು ಗುರುತಿಸಲಾಗಿದೆ. ಅಲ್ಲದೇ, ಬಾವಿಯ ಬಳಿ ಹೋದಾಗ ಕಾಲು ಜಾರಿ ಬಿದ್ದು ಯುವತಿ ಸುನೀತಾ ಮೃತಪಟ್ಟಿದ್ದಾಳೆ. ಸ್ಥಳೀಯರ ಸಹಾಯದಿಂದ ಯುವತಿ ಶವ ಹೊರಗಡೆಗೆ ತೆಗೆಯಲಾಗಿದೆ. ಕೂಡಗಿ ಎನ್‌ಟಿಪಿಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.