ಹರ್ ಘರ್ ತಿರಂಗಾ ಅಭಿಯಾನದಡಿ ಸೈಕಲ್ ರ್ಯಾಲಿ ಹಾಗೂ ತಿರಂಗಾ ಜನಯಾತ್ರೆ ಅಭಿಯಾನಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ
ವಿಜಯಪುರ ಆಗಸ್ಟ್ 12 :ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಹರ್-ಘರ್ ತಿರಂಗಾ ಅಭಿಯಾನದಡಿ ಐತಿಹಾಸಿಕ ಗೋಲಗುಮ್ಮಟದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸೈಕಲ್ ರ್ಯಾಲಿ ಹಾಗೂ ತಿರಂಗಾ ಜನಯಾತ್ರೆ ಜಿಲ್ಲಾಧಿಕಾರಿ ಕಚೇರಿಯವರೆಗೆ ಹಮ್ಮಿಕೊಳ್ಳಲಾಯಿತು.
ಗೋಳಗುಮ್ಮಟ ಆವರಣದಿಂದ ನಡೆದ ಈ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು.
ಕಮಾಂಡೋ ಅಕಾಡೆಮಿಯ ಹಾಗೂ ನಗರದ ಸೈಕ್ಲಿಸ್ಟ್ ಅವರು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜಾಥಾ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಕ್ರಿಡಾಧಿಕಾರಿ ರಾಜಶೇಖರ್ ದೈವಾಡಿ,ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಎಸ್.ಬಿ.ಪಾಟೀಲ, ತರಬೇತುದಾರರು, ಸಾರ್ವಜನಿಕರು ಉಪಸ್ಥಿತರಿದರು.