ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ : ಸಚಿವ ಎಮ್ ಬಿ ಪಾಟೀಲ
ವಿಜಯಪುರ : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜ.೯ರಂದು ವಿಜಯಪುರಕ್ಕೆ ಆಗಮಿಸಿ ವೀರ ರಾಣಿ ಕಿತ್ತೂರು ಚನ್ನಮ್ಮ ಪ್ರತಿಮೆ ಅನಾವರಣ ಒಳಗೊಂಡಂತೆ, ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಬೃಹತ್ ಮತ್ತು ಮದ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಗುರುವಾರ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ ಹಾಗೂ ಕಾರ್ಯಕ್ರಮದ ವೇದಿಕೆ ಸ್ಥಳಕ್ಕೆ ಭೇಟಿ ನೀಡಿ ಕೈಗೊಂಡಿರುವ ಸಿದ್ಧತೆಯ ಕುರಿತು ಪರಿಶೀಲನೆ ನಡೆಸಿದರು.
ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.ವೇದಿಕೆ ಕಾರ್ಯಕ್ರಮವನ್ನು ಸೂಸೂತ್ರವಾಗಿ ನಡೆಸುವಂತೆ ಸೂಚಿಸಿದ ಅವರು, ಆಸನದ ವ್ಯವಸ್ಥೆ, ಕುಡಿಯು ನೀರು ಹಾಗೂ ಕೈಗೊಂಡಿರುವ ಭದ್ರತಾ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಹಾಗೂ ಭೂತನಾಳದ ಸಮೀಪ ನಿರ್ಮಾಣಗೊಂಡಿರುವ ಸೈಕ್ಲಿಂಗ್ ವೇಲೋಡ್ರಾಮ್ ನಿರ್ಮಾಣ ಕಾಮಗಾರಿಯ ಕ್ರೀಡಾಪಟುಗಳಿಗಿರುವ ಸೌಲಭ್ಯಗಳು, ಸುರಕ್ಷತಾ ವ್ಯವಸ್ಥೆಗಳು, ತಾಂತ್ರಿಕ ಅಂಶಗಳ ಕುರಿತು ಸಂಬAಧಿಸಿದ ಅಧಿಕಾರಿಗಳು ಸಚಿವರಿಗೆ ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ ವಿಜಯಪುರ, ಜಮಖÀಂಡಿ, ಬಾಗಲಕೋಟ ಜಿಲ್ಲೆಗಳ ಸೈಕ್ಲಿಂಗ್‌ನಲ್ಲಿ ಚಿನ್ನ, ಬೆಳ್ಳಿ, ಹಾಗೂ ಕಂಚಿನ ಪದಕ ಪಡೆಯುವ ಮೂಲಕ ಈ ಭಾಗದ ಕ್ರೀಡಾ ಸಾಧಕರು ರಾಷ್ಟಿçÃಯ,ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಈ ವೇಲೋಡ್ರಾಮ್ ನಿರ್ಮಾಣದಿಂದ ಈ ಭಾಗದ ಕ್ರೀಡಾಪಟುಗಳಿಗೆ ಮತ್ತಷ್ಟು ಅನುಕೂಲವಾಗಿದೆ ಎಂದು ಹೇಳಿದರು.ಈ ಸಂದರ್ಭ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಸೆರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


















