• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

    ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

    ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

    ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನೊಂದವರ ನೋವಿಗೆ ಧ್ವನಿಯಾದ ಡಿ.ದೇವರಾಜ ಅರಸು

      Voice of Janata

      August 21, 2024
      0
      ನೊಂದವರ ನೋವಿಗೆ ಧ್ವನಿಯಾದ ಡಿ.ದೇವರಾಜ ಅರಸು
      0
      SHARES
      161
      VIEWS
      Share on FacebookShare on TwitterShare on whatsappShare on telegramShare on Mail

      ದಿ: ಡಿ.ದೇವರಾಜ್ ಅರಸು ಜಯಂತಿ ಕಾರ್ಯಕ್ರಮ
      ನೊಂದವರ ನೋವಿಗೆ ಧ್ವನಿಯಾದ ಡಿ.ದೇವರಾಜ ಅರಸು
      -ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷಸಂಗಮೇಶ ಬಬಲೇಶ್ವರ

      ವಿಜಯಪುರ, ಆಗಸ್ಟ್ 20, : ನೊಂದವರ ನೋವಿಗೆ ಧ್ವನಿಯಾಗಿ ಸರ್ಕಾರದ ಯೋಜನೆಗಳನ್ನು ಎಲ್ಲಾ ವರ್ಗದವರಿಗೂ ತಲುಪಿಸಿ ನಾಡಿನ ಶ್ರೇಯೋಭಿವೃದ್ಧಿಗೆ ಶ್ರಮಿಸಿ,ಮಾದರಿಯಾದವರು ಡಿ.ದೇವರಾಜ ಅರಸು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹೇಳಿದರು.

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 109 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

      ತ್ಯಾಗ, ಪ್ರೀತಿ ಜೀವನದ ಉಸಿರಾಗಿಸಿಕೊಂಡು ನೊಂದವರ, ಅಶಿಕ್ಷಿತರ, ನಿರ್ಲಕ್ಷಿತ ಸಮುದಾಯಗಳ ಪರ ಇಡೀ ಜೀವನವನ್ನು ಮೀಸಲಿಟ್ಟು, ಭೂಸುಧಾರಣೆಯ ಕಾಯ್ದೆಯಂತಹ ಮಹತ್ವ ಯೋಜನೆ ರೂಪಿಸಿದ ಮಹನೀಯರಾಗಿದ್ದಾರೆ ಎಂದು ಹೇಳಿದರು.
      ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯಕ ಮಾತನಾಡಿ, ಉಳುವವನೆ ಭೂ ಒಡೆಯ ಎಂಬ ಕಾನೂನಿನ ಮೂಲಕ ಎಲ್ಲಾ ವರ್ಗಗಳಲ್ಲೂ ಸಮಾನತೆಯ ಆಶಯವನ್ನು ಬಿತ್ತಿದ ಅರಸು ಅವರು, ಹಳ್ಳಿಯ ವಿದ್ಯಾರ್ಥಿಗಳು ನಗರಗಳಲ್ಲಿ ಶಿಕ್ಷಣ ಪಡೆಯಲು ಅನುಕೂಲವಾಗಲು ವಸತಿನಿಲಯಗಳ ಸ್ಥಾಪನೆಗೆ ನಾಂದಿ ಹಾಡಿದವರು ಎಂದರು.

      ನಿರುದ್ಯೋಗ ಸಮಸ್ಯೆ ಪರಹಾರಕ್ಕೆ ಶ್ರಮಿಸಿದರು. ಸಂಘರ್ಷಗಳಿಂದ ಕೂಡಿದ ಜೀವನ ನಡೆಸಿದರೂ ಕೂಡಾ ನಾಡಿನ ಏಳ್ಗೆಗಾಗಿ ಶ್ರಮಿಸಿದ ಅರಸು ಅವರ ಜೀವನ ಚರಿತ್ರೆ, ಸಾಧನೆ, ಯೋಜನೆಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳು, ಯುವಜನರಿಗೆ ಅವರ ಸಂದೇಶಗಳನ್ನು ಪ್ರಚಾರಪಡಿಸಬೇಕು ಎಂದು ಹೇಳಿದರು.

      ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಶೋಷಿತರ ಅಭಿವೃದ್ಧಿಗಾಗಿ ಶ್ರಮಿಸಿದ ಅವರು, ಉಳುವವನೇ ಭೂ ಒಡೆಯ ಎನ್ನುವ ಭೂ ಸುಧಾರಣಾ ಕಾಯಿದೆ ಜಾರಿಗೆ ತರುವ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ್ದಾರೆ. ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಎಲ್ಲ ವರ್ಗದವರ ಬಾಳು ಹಸನಗೊಳಿಸದವರು ಡಿ.ದೇವರಾಜ ಅರಸು. ಎಲ್ಲ ವರ್ಗದ ಜನರ ಏಳಿಗೆಗಾಗಿ ಹಾಗೂ ನಾಡು ನುಡಿಗಾಗಿ ಅವರ ಕೊಡುಗೆ ಅಪಾರವಾಗಿದೆ. ಆಡಳಿತ ಸುಧಾರಣೆಗೆ ಶ್ರಮವಹಿಸಿದ ಇಂತಹ ಮಹಾನ್ ವ್ಯಕ್ತಿಯ ಕೊಡುಗೆಗಳನ್ನು ಸ್ಮರಿಸುವ ಮೂಲಕ ಅವರ ತತ್ವಾದರ್ಶ ಅವರ ಕಾರ್ಯಗಳನ್ನು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ನಡೆಯಬೇಕು ಎಂದು ಹೇಳಿದರು.
      ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಉಪನ್ಯಾಸಕರಾದ ವಿಷ್ಣು ಸಿಂಧೆ ಉಪನ್ಯಾಸ ನೀಡಿದರು.

      ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಸಾಂಸ್ಕøತಿಕ ಹಾಗೂ ಕ್ರೀಡಾ ಸ್ಪರ್ದೆಯಲ್ಲಿ ವಿಜೇತರಾದ ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು. ರಂಗನಾಥ ಬತ್ತಾಸೆ ಮತ್ತು ಸುನಂದಾ ಬತ್ತಾಸೆ ದಂಪತಿಗಳು ಹಾಗೂ ಸಂಗಡಿಗರಿಂದ ಡಿ.ದೇವರಾಜ ಅರಸು ಅವರ ಜೀವನ ಮತ್ತು ಸಾಧನೆಯ ಬಗ್ಗೆ ರೂಪಕವನ್ನು ಪ್ರದರ್ಶನ ಮಾಡಿದರು.

      ವೇದಿಕೆಯ ಮೇಲೆ ಮಹಾನಗರ ಪಾಲಿಕೆಯ ಉಪಮೇಯರ್ ದಿನೇಶ್ ಹಳ್ಳಿ, ಪಾಲಿಕೆ ಸದಸ್ಯರುಗಳಾದ ಆರತಿ ಶಹಾಪೂರ, ಅಪ್ಪು ಪೂಜಾರಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಅಶೋಕ್ ಘೋಣಸಗಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣ ಆಶಾಪೂರ, ಅರಣ್ಯ ಇಲಾಖೆಯ ಅಧಿಕಾರಿ ವನಿತಾ ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳಾದ ಸಿದ್ದು ರಾಯಣ್ಣನವರ, ಸೋಮನಗೌಡ ಕಲ್ಲೂರ, ಬೀಮರಾಯ ಜಿಗಜಿಣಗಿ, ಅಡಿವೆಪ್ಪಾ ಸಾಲಗಲ್, ದೇವೆಂದ್ರ ಮೆರೆಕರ, ವಿರೇಶ್ ಕುಲಕರ್ಣಿ, ವಿದ್ಯಾವತಿ ಅಂಕಲಗಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

      ಮೆರವಣಿಗೆ: ಇದಕ್ಕೂ ಮೊದಲು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಹಮ್ಮಿಕೊಂಡ ಡಿ. ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು. ಭಾವಚಿತ್ರ ಮೆರವಣಿಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಕನಕದಾಸ ವೃತದ ಮೂಲಕ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ನಡೆಯಿತು.

      Tags: #D. Devaraja Arasu became a voice for the pain of the afflicted#indi / vijayapur#Public News#Voiceofjanata.in#ನೊಂದವರ ನೋವಿಗೆ ಧ್ವನಿಯಾದ ಡಿ.ದೇವರಾಜ ಅರಸು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿಂದೂ ಹಬ್ಬಗಳನ್ನ ಅದ್ಧೂರಿಯಾಗಿ ಆಚರಿಸಲು ನಿರ್ಧಾರ

      ಹಿಂದೂ ಹಬ್ಬಗಳನ್ನ ಅದ್ಧೂರಿಯಾಗಿ ಆಚರಿಸಲು ನಿರ್ಧಾರ

      March 17, 2026
      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ

      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ

      March 17, 2026
      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      March 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.