ಇಂಡಿ : ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆಗೆ ನೀರು ಹರಿಸುವಂತೆ ಗುತ್ತಿ ಬಸವಣ್ಣ ಹೋರಾಟ ಸಮಿತಿಯವರು ಹೋರಾಟ 68ನೇ ದಿನವೂ ಮುಂದುವರಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಕಳೆದ 68ನೇ ದಿನಗಳಿಂದ ಹೋರಾಟ ಮಾಡುತ್ತಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆಯ ಗುತ್ತಿ ಬಸವಣ್ಣ ಏತ ನೀರಾವರಿಗೆ ನೀರು ಹರಿಸುವಂತೆ ಒತ್ತಾಯಿಸಿದರು. ಇನ್ನೂ ಪ್ರತಿಭಟನಾ ಸ್ಥಳಕ್ಕೆ ಡಿಸಿ ವಿಜಯಮಹಾಂತೇಶ ದಾನಮ್ಮನವರ ಹಾಗೂ ಎಸ್ಪಿ ಆನಂದಕುಮಾರ ಭೇಟಿ ನೀಡಿದರು. ಅಲ್ಲದೇ, ಡಿಸಿ ಮೂಲಕ ಸರ್ಕಾರಕ್ಕೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.