ಇಂಡಿ : ಅಪರಿಚಿತ ವ್ಯಕ್ತಿಯ ಶವವೊಂದು ಅನುಮಾಸ್ಪದ ರೀತಿಯಲ್ಲಿ ಭೀಮಾನದಿಯಲ್ಲಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬರಗುಡಿ ಹತ್ತಿರದ ನದಿಯಲ್ಲಿ ನಡೆದಿದೆ. ಇನ್ನು ಸುಮಾರು 40-45 ವ್ಯಕ್ತಿ ಶವ ಪತ್ತೆಯಾಗಿದ್ದು, ವ್ಯಕ್ತಿಯನ್ನು ಕೊಲೆಗೈದು ನದಿಯಲ್ಲಿ ಎಸೆದು ಹೋಗಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.