ವಿಜಯಪುರ : ಅನುಮಾನಸ್ಪದ ರೀತಿಯಲ್ಲಿ
ಅಪರಿಚಿತ ವ್ಯಕ್ತಿಯ ಶವವೊಂದು ಮುಳ್ಳಿನ ಕಂಠಿಯಲ್ಲಿ ಪತ್ತೆಯಾಗಿರುವ ಘಟನೆ ವಿಜಯಪುರ ತಾಲ್ಲೂಕಿನ ಬರಟಗಿ ತಾಂಡದ ಬಳಿ ನಡೆದಿದೆ. ಸುಮಾರು 40-45 ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಶವದ ಪಕ್ಕದಲ್ಲಿ ಚಪ್ಪಲಿ ಪತ್ತೆಯಾಗಿದೆ. ಇದು ಕೊಲೆಯೋ ಅಥವಾ ಸಹಜ ಸಾವೋ ಎಂಬುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.