ವಿಜಯಪುರ : ಮರಳು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಕೆಸರಟ್ಟಿ ಕ್ರಾಸ್ ಬಳಿ ನಡೆದಿದೆ. 22 ವರ್ಷದ ಮಹೇಶ ತಳವಾರ ಮೃತಪಟ್ಟಿರುವ ದುರ್ದೈವಿ. ಇನ್ನೂ ಅಂಬಳನೂರ ಬಳಿಯ ಡೋಣಿ ನದಿಯಿಂದ ಟ್ರ್ಯಾಕ್ಟರ್‌ನಲ್ಲಿ ಮರಳು ಸಾಗಿಸುತ್ತಿದ್ದ ಸಂದರ್ಭ ಕೆಸರಟ್ಟಿ ಕ್ರಾಸ್ ಬಳಿ ಟ್ರ್ಯಾಕ್ಟರ್
ಪಲ್ಟಿಯಾಗಿದೆ. ಟ್ರ್ಯಾಕ್ಟರ್‌ನಲ್ಲಿದ್ದ ಮಹೇಶ ಕೆಳಗೆ ಬಿದ್ದಿದ್ದು, ಆತನ ಮೇಲೆ ಮರಳು ತುಂಬಿದ ಟ್ರೇಲರ್ ಬಿದ್ದಿದೆ. ಪರಿಣಾಮ ಮಹೇಶ ಸ್ಥಳದಲ್ಲಿಯೇ ಅಸುನೀಗಿದ್ದಾನೆ. ಕಲಕೇರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.