ಜಿಲ್ಲಾಡಳಿತದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ
ವಿಜಯಪುರ, ಅಕ್ಟೋಬರ್,09 : ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 17ರಂದು ಶ್ರೀ ಮರ್ಹಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಈ ತಿರ್ಮಾನ ಕೈಗೊಳ್ಳಲಾಯಿತು.
ಅಕ್ಟೋಬರ್ 17ರಂದು ಬೆಳಿಗ್ಗೆ 9.30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾತಂಡಗಳೊAದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ಚಾಲನೆ ನೀಡಲಾಗುವುದು. ನಡೆಯಲಿದ್ದು, ಮೆರವಣಿಗೆಯೂ ನಗರದ ಮಾರುಕಟ್ಟೆ ರಸ್ತೆ ಮೂಲಕ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಕನಕದಾಸ ವೃತ್ತದ ಮೂಲಕ ಶ್ರೀ ಕಂದಗಲ್ ಹನುಮಂತರಾಯ ರಂಗಮAದಿರ ತಲುಪಲಿದೆ.
ರಂಗಮAದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದೂ ಅವರು ತಿಳಿಸಿದರು.
ಅಂದು ನಗರದ ವಿವಿಧ ವೃತ್ತಗಳಿಗೆ ಸ್ವಚ್ಚತೆ ಹಾಗೂ ದೀಪಾಲಂಕಾರಗೊಳಿಸುವಂತೆ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸುವುದು, ವೇದಿಕೆ, ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲು ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣ ಆಶಾಪೂರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಹೆಸ್ಕಾಂನ ಅಧೀಕ್ಷಕ ಅಭಿಯಂತರರಾದ ಸಿದ್ದಪ್ಪ ಬಿಂಜಗೇರೆ, ವಿಜಯಪುರದ ಗ್ರೇಡ್ 2 ತಹಶೀಲ್ದಾರ ಐ.ಎಚ್. ತುಂಬಗಿ, ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ಇಂಡಿ ತಾಲ್ಲೂಕು ಅಧ್ಯಕ್ಷ ರೇವಣ್ಣ ಹತ್ತಳ್ಳಿ ಹಾಗೂ ವಿವಿಧ ಸಂಘ ಸಂಸ್ಥೆಯ ಪಧಾದಿಕಾರಿಗಳಾದ ಅನೀಲ ಹೊಸಮನಿ, ಸೋಮು ಜಮಾದಾರ, ಆನಂದ ತಳವಾರ, ಶಿವಶರಣ ನಾಟೀಕಾರ, ಪ್ರಕಾಶ ಗುಡಿಮನಿ, ಮಹೇಶ ಮುರಾಳ, ಚಂದ್ರು ಡೋಲ್ರೋಜ, ಸಂಗಪ್ಪ ತಳವಾರ, ಪರಶುರಾಮ ದಿಂಡವಾರ, ಮಳಸಿದ್ದ ನಾಯ್ಕೋಡಿ, ಶಾಸಪ್ಪ ಬಿಸಿನಾಳ, ನಿಂಗಪ್ಪ ನಾಟೀಕಾರ, ಸಂಜೀವಕುಮಾರ ನಾಯ್ಕೋಡಿ, ಮಲ್ಲಿಕಾರ್ಜುನ ಬಟಗಿ, ಬಿ.ಎಸ್.ಗಸ್ತಿ, ಅಶೋಕ ಚಲವಾದಿ, ಆನಂದ ಕೊಂಡಗೂಳಿ, ರಮೇಶ ದಳವಾಯಿ, ಬಿ.ಎಸ್.ಗಸ್ತಿ, ಹಣಮಂತ ಹಂಚನಾಳ, ಸದಾಶಿವ ಕೊಣ್ಣುರ, ಬಾಪು ಜ್ವಾಲಾಮುಖಿ, ಶಿವಾನಂದ ಹಿಪ್ಪರಗಿ, ಹಣಮಂತ ಚನ್ನಬಸಪ್ಪಗೋಳ, ರಂಗನಾಥ ಬತ್ತಾಸೆ, ಸಿದ್ದು ರಾಯಣ್ಣವರ, ವಿದ್ಯಾವತಿ ಅಂಕಲಗಿ, ಸೋಮನಗೌಡ ಕಲ್ಲೂರ, ದೇವೆಂದ್ರ ಮೇರೆಕರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.