ಜ.14ರಂದು ಶಿವಯೋಗಿ ಸಿದ್ದರಾಮೇಶ್ವರ, ಜ.19ರಂದು ಮಹಾಯೋಗಿ ವೇಮನ, ಜ.25ರಂದು ಸವಿತಾ ವಹರ್ಷಿ ಅವರ ಜಯಂತಿ ಅರ್ಥ ಪೂರ್ಣ ಆಚರಣೆಗೆ ನಿರ್ಧಾರ
ವಿವಿಧ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ವಿಜಯಪುರ, ಜ.7 : .14ರಂದು ಶಿವಯೋಗಿ ಸಿದ್ದರಾಮೇಶ್ವರ, ಜ.19ರಂದು ಮಹಾಯೋಗಿ ವೇಮನ, ಹಾಗೂ ಜ.25ರಂದು ಸವಿತಾ ವಹರ್ಷಿ ಜಯಂತಿ ಆಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ವಿವಿಧ ಮಹನೀಯರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜ.14ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಹಾಗೂ ಜ.19ರಂದು ಮಹಾಯೋಗಿ ವೇಮನ ಜಯಂತಿ ಅಂಗವಾಗಿ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಹಮ್ಮಿಕೊಂಡು, ನಂತರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲು ಹಾಗೂ ಜ.25ರಂದು ಸವಿತಾ ವಹರ್ಷಿ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲು ನಿರ್ಣಯಿಸಲಾಯಿತು.
ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ, ಸಂಚಾರ ವ್ಯವಸ್ಥೆ, ಕಲಾ ತಂಡಗಳ ವ್ಯವಸ್ಥೆ ಹಾಗೂ ಶಿಷ್ಠಾಚಾರದಂತೆ ಕಾರ್ಯಕ್ರಮ ಆಯೋಜಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಕರಾದ ಸಂತೋಷ ಭೋವಿ ಜಿಲ್ಲಾ ನಿರೂಪಣಾ ಅಧಿಕಾರಿ ನಿರ್ಮಲಾ ಸುರುಪುರ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರುಗಳಾದ ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ, ದೇವೇಂದ್ರ ಮೀರೆಕರ, ಮೈಬೂಬ ಜೋಬುಳ, ಚೇತನ ಬುರಣಾಪುರ, ಕಂಠೀರವ ಕಲ್ಲೋಳ್ಳಿ, ಕೆ.ಬಿ. ಪಾಟೀಲ, ಭರತ ಕೋಳಿ, ರಾಘವೇಂದ್ರ ಗುರಜಾಲ, ಡಾ.ಎಮ್. ಆರ್ ಉಪಸ್ಥಿತರಿದ್ದರು.


















