ಸರ್ಕಾರದ ವಿರುದ್ಧ ಘೋಷಣೆ..! ಎಬಿವಿಪಿ ವಿಧ್ಯಾರ್ಥಿಗಳಿಂದ ಪ್ರತಿಭಟನೆ ಕಾರಣ ಗೊತ್ತಾ..?
ಇಂಡಿ: ವಿದ್ಯಾರ್ಥಿ ವೇತನ ಬಿಡುಗಡೆಗೆ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಪಟ್ಟಣದಲ್ಲಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಸಾವಿರಾರೂ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಶ್ರೀ ಶಾಂತೇಶ್ವರ ಕಾಲೇಜಿನಿಂದ ಆರಂಭಗೊಂಡ ಪ್ರತಿಭಟನಾ ಮೆರವಣ ಗೆಯು ಪ್ರಮುಖ ರಸ್ತೆ, ವೃತ್ತಗಳ ಮೂಲಕ ಸಾಗಿ ಮಿನಿ ವಿಧಾನಸೌಧದ ಆವರಣದಲ್ಲಿ ಸಮಾವೇಶಗೊಂಡಿತು. ನಂತರ ಉಪ ತಹಶೀಲ್ದಾರ ಸಿದ್ದರಾಮ ಮುಜಗೊಂಡ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು ಮೆರವಣ ಗೆಯುದ್ದಕ್ಕೂ ವಿದ್ಯಾರ್ಥಿಗಳು ಸರ್ಕಾರಕ್ಕೆ ಧಿಕ್ಕಾರ, ಬೇಕೆ ಬೇಕು ನ್ಯಾಯ ಬೇಕು ಎಂಬಿತ್ಯಾದಿ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಈ ವೇಳೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂಡಿ ನಗರ ಕಾರ್ಯದರ್ಶಿ ಸಚಿನ್ ಧಾನಗೊಂಡ ಮಾತನಾಡಿ, ಸರ್ಕಾರವು ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿಲ್ಲ. ಹಾಗಾಗಿ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ. ಕೂಡಲೇ ಸರ್ಕಾರ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಸರೆ ಆಗಿರುವ ಬಾಕಿ ಇರುವ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿ ವಿದ್ಯಾರ್ಥಿಗಳ ಹಿತ ಕಾಪಾಡಬೇಕು ಎಂದ ಅವರು, ೨೦೨೪-೨೫ನೇ ಸಾಲಿನ ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ತಕ್ಷಣವೇ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕಾ ಸಂಮಚಾಲಕ ಸಮರ್ಥ ಗಾಯಕವಾಡ ಮಾತನಾಡಿ, ರಾಜ್ಯದಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಹಾಸ್ಟೆಲ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು, ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನವನ್ನು ತಕ್ಷಣವೇ ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಚಿದಾನಂದ ತೊಳನೂರ, ಅರುಣ ಪೂಜಾರಿ, ಪರಮೇಶ್ವರ ಮೂದೊಳ್ಳಿ, ಅಂಬಣ ಪೂಜಾರಿ, ದೀಪಾ ಗಿರಣ ವಡ್ಡರ, ಬಾಗ್ಯಶ್ರೀ ಎಸ್ ಸೇರಿದಂತೆ ಅನೇಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ‍್ಯಕರ್ತರು ಇದ್ದರು.
ಇಂಡಿ: ಪಟ್ಟಣದ ಮಿನಿ ವಿಧಾನಸೌಧದ ಮುಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಉಪ ತಹಶೀಲ್ದಾರ ಸಿದ್ದರಾಮ ಮುಜಗೊಂಡ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು