ದೇಸಾಯಿ ಇಂಟರ್ ನ್ಯಾಷನಲ್ ಸ್ಕೂಲ್
ವಿದ್ಯಾರ್ಥಿಗಳು ಪ್ರಥಮಸ್ಥಾನ
ಇಂಡಿ: ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಪಟ್ಟಣದ ದೇಸಾಯಿ ಇಂಟರ್ ನ್ಯಾಷನಲ್ ಸ್ಕೂಲ್
ವಿದ್ಯಾರ್ಥಿಗಳು ಪರೇಡ್ ಮಾಡುವದರಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ಕಾರ್ಯಕ್ರಮದ ಅಧ್ಯಕ್ಷರಾಗಿ ಆಗಮಿಸಿದ ಶಾಸಕ ಯಶವಂತ್ರಾಯಗೌಡ ಪಾಟೀಲ ಮಕ್ಕಳಿಗೆ ಪ್ರಶಸ್ತಿ ಪ್ರಮಾಣ ಪತ್ರ ಹಾಗೂ ಟ್ರೋಫಿಯನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಕ್ಕಳಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕ ನಾಗರಾಜ ವಡ್ನಳ್ಳಿ ಹಾಗೂ ಮಕ್ಕಳಿಗೆ ನೃತ್ಯ ತರಬೇತಿ ನೀಡಿದ ಶಿಕ್ಷಕ ಮಲ್ಲಿಕಾರ್ಜುನ ಪಂಟೋಜಿ, ಮಹಿಬೂಬ ಮೋಮಿನ, ಸಂಸ್ಥೆಯ ಅದ್ಯಕ್ಷ ಎಸ್.ಎಸ್. ದೇಸಾಯಿ ಹಾಗೂ ಪ್ರಾಂಶುಪಾಲ ವಿದ್ಯುಲತಾ ಸುತಾರ, ಎಲ್ಲ ಸಿಬ್ಬಂದಿಗಳು ಅಭಿನಂದಿಸಿದರು.