ವಿಜಯಪುರ : ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರಕ್ಕೆ ಟಿಕೆಟ್ ಇನ್ನೂ ಅಂತಿಮವಾಗದ ಮಧ್ಯೆಯೂ ನಾನೇ ಕಾಂಗ್ರೆಸ್ ಅಭ್ಯರ್ಥಿ ಎಂದು ಪೋಸ್ಟರ್ ಹಾಕಿಕೊಂಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಪ್ರಚಾರದ ಪೋಸ್ಟರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಂತ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ.
ದೇವರಹಿಪ್ಪರಗಿ ಕಾಂಗ್ರೆಸ್ ಅಭ್ಯರ್ಥಿ ಅಂತ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ನಾನೇ ಅಭ್ಯರ್ಥಿ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಈಗಾಗಲೇ 10 ಆಕಾಂಕ್ಷಿಗಳ ಹೆಸರು ಕೇಳಿ ಬಂದಿದೆ. ಆದ್ರೇ, ಕಾಂಗ್ರೆಸ್ ಹೈಕಮಾಂಡ್ ಇಲ್ಲಿಯ ವರೆಗೂ ವಿಜಯಪುರ ಜಿಲ್ಲೆಯ ನಾಲ್ಕು ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡಿಲ್ಲ.