ಮಾದರಿ ಅಂಗನವಾಡಿಗಳ ಅಭಿವೃದ್ಧಿ : ಜಿಪಂ ಸಿಇಒ ರಿಷಿ ಆನಂದ
ವಿಜಯಪುರ, ನ.05: ಜಿಲ್ಲೆಯಲ್ಲಿ ಮಾದರಿ ಅಂಗನವಾಡಿಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ 34 ಅಂಗನವಾಡಿಗಳನ್ನು ಮಾದರಿ ಹಾಗೂ ಆಕರ್ಷಕ ಅಂಗನವಾಡಿ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ಗ್ರಾಮೀಣ ಮಟ್ಟದ ಮಕ್ಕಳ ಶೈಕ್ಷಣಿಕ ಜೀವನದ ಅಡಿಪಾಯವು ಅತ್ಯಂತ ಸದೃಢವಾಗುವುದರ ಜೊತೆಗೆ ಮಕ್ಕಳ ಹಾಜರಾತಿಯ ನಿರಂತರತೆಯನ್ನು ಕಾಯ್ದುಕೊಂಡು ಮಕ್ಕಳ ಸ್ನೇಹಿ ಕೇಂದ್ರಗಳನ್ನಾಗಿಸುವುದಾಗಿದೆ. ಆಟೋಟಗಳಲ್ಲಿ ಪ್ರೋತ್ಸಾಹ ದೊರೆತು ದೈಹಿಕ ಹಾಗೂ ಮಾನಸಿಕ ಸದೃಢತೆ ಬೆಳೆಸುವುದಾಗಿದೆ. ಈಗಾಗಲೇ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಎಲ್ಲಾ 34 ಅಂಗನವಾಡಿ ಕೇಂದ್ರಗಳಿಗೆ ಕಡ್ಡಾಯವಾಗಿ ಬಾಲ ಸ್ನೇಹಿ ಪೇಂಟಿAಗ್, ಬಯೋಫೆನ್ಸಿಂಗ್, ಪೌಷ್ಟಿಕ ಕೈತೋಟ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ 2,755 ಅಂಗನವಾಡಿ ಕೇಂದ್ರಗಳಿದ್ದು, ಅದರಲ್ಲಿ 1,425 ಸ್ವಂತ ಕಟ್ಟಡಗಳಲ್ಲಿ ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. 2022-23ನೇ ಸಾಲಿನಲ್ಲಿ ಒಟ್ಟು 100 ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅದರಲ್ಲಿ 66 ಅಂಗನವಾಡಿ ಕೇಂದ್ರಗಳು ಈಗಾಗಲೇ ಪೂರ್ಣಗೊಂಡಿದ್ದು, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣಕ್ಕಾಗಿ ಬಾಲಸ್ನೇಹಿ ಪೇಂಟಿಂಗ್‌ನಿಂದ ಕೂಡಿರುವ ಸುಂದರವಾದ ಕೊಠಡಿ, ಪ್ರತ್ಯೇಕವಾದ ಮತ್ತು ವ್ಯವಸ್ಥಿತವಾದ ಅಡುಗೆ ಕೊಠಡಿ ನಿರ್ಮಾಣ, ದಾಸ್ತಾನು ಕೊಠಡಿ ಹಾಗೂ ಶೌಚಾಲಯ, ಮಕ್ಕಳಿಗೆ ಪ್ರತ್ಯೇಕ ಕೈತೊಳೆಯುವ ಸ್ಥಳ, ಕೇಂದ್ರದ ಒಳ-ಹೊರಗೂ ಅತ್ಯಾಕರ್ಷಕ ಬಾಲಸ್ನೇಹಿ ಪೇಂಟಿಂಗ್, ಅಂಗನವಾಡಿ ಕೇಂದ್ರಗಳಿಗೆ ಅವಶ್ಯಕವಾದ ನೀರಿನ ಸೌಕರ್ಯ, ವಿದ್ಯುತ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕೇಂದ್ರದ ಆವರಣದಲ್ಲಿ ಕಿಚನ್ ಗಾರ್ಡನ್ ಹಾಗೂ ಜೈವಿಕ ಬೇಲಿ ನಿರ್ಮಾಣ ಮಾಡಲಾಗಿದೆ. ಹೆಚ್ಚಿನ ಸ್ಥಳಾವಕಾಶ ಇರುವ ಅಂಗನವಾಡಿ ಕೇಂದ್ರಗಳಿಗೆ ಕಂಪೌAಡ ನಿರ್ಮಾಣವೂ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.