ಮುದ್ದೇಬಿಹಾಳ:ತಾಲೂಕಿನ ನಾಗಬೇನಾಳ ಗ್ರಾಪಂ ವ್ಯಾಪ್ತಿಯ ನಾರಾಯಣಪುರ ಜಲಾಶಯದ ಹಿನ್ನೀರು ಬಳಸಿ ವಿದ್ಯುತ್ ಉತ್ಪಾದಿಸುತ್ತಿರುವ ಶ್ರೀ ಮುರುಡೇಶ್ವರ ಪವರ್ ಕಾರ್ಪೋರೇಷನ್ ಲಿಮಿಟೆಡ್ ನವರು ಗ್ರಾಪಂಗೆ ತೆರಿಗೆ ತುಂಬದೇ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ, ಲಕ್ಷಾಂತರ ರೂ. ತೆರಿಗೆ ಬಾಕಿ ಇದೆ. ಇದನ್ನು ವಸೂಲಿ ಮಾಡಬೇಕು ಎಂದು ಆಗ್ರಹಿಸಿ ಮಂಗಳವಾರ ಫೆ.11ರಂದು ತಾಪಂ ಕಾರ್ಯಾಲಯ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ಯುವ ಜನ ಸೇನೆ ರಾಜ್ಯ ಅಧ್ಯಕ್ಷ ಶಿವಾನಂದ ವಾಲಿ ಅವರು ಜಿಲ್ಲಾಧಿಕಾರಿ, ತಹಶೀಲ್ದಾರ್, ತಾಪಂ ಇಒ ಅವರಿಗೆ ಮನವಿ ಸಲ್ಲಿಸಿದ ಪತ್ರದಲ್ಲಿ ಅವರು ತಿಳಿಸಿದ್ದಾರೆ.