ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ
ವಿಜಯಪುರ, ಜ.13 : ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ 2025-26ನೇ ಸಾಲಿನ ಮೂರನೇ ತ್ರೈಮಾಸಿಕದ ದಿಶಾ ಪ್ರಗತಿ ಪರಿಶೀಲನಾ ಸಭೆಯನ್ನು ಸಂಸದ ರಮೇಶ ಜಿಗಜಿಣಗಿ ಅವರ ಅಧ್ಯಕ್ಷತೆಯಲ್ಲಿ ಇದೇ ಜ.17ರಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


















