ಕರ್ನಾಟಕ ಪತ್ರಕರ್ತರ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ .
ಹನೂರು : ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ನಡೆದಂತಹ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಸಂಕೇತಿಕವಾಗಿ ಉಚಿತ ನೊಟ್ ಬುಕ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಅದರ ಮುಂದುವರೆದ ಭಾಗವಾಗಿ ಇಂದು ಕಾಂಚಳ್ಳಿ ಗ್ರಾಮದ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಗಳನ್ನು ನೀಡಲಾಗಿದೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ಹನೂರು ತಾಲ್ಲೂಕು ಘಟಕದ ಅಧ್ಯಕ್ಷರಾದ ಬಂಗಾರಪ್ಪ .ಸಿ ರವರು ತಿಳಿಸಿದರು .
ತಾಲ್ಲೂಕಿನ ಕಾಂಚಳ್ಳಿ ಗ್ರಾಮದಲ್ಲಿ ಇಂದು ಹಮ್ಮಿಕೊಂಡಿದ್ದ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು
ಕಲಿಕ ಹಂತದಲ್ಲಿ ಉತ್ತಮ ಭೋದನೆ ಮತ್ತು ಲೇಖನ ಸಾಮಾಗ್ರಿಗಳನ್ನು ದಾನಿಗಳ ಸಹಯೋಗ ದೊಂದಿಗೆ ವಿತರಣೆ ಮಾಡಲು ನಮ್ಮ ಸಂಘದ ಎಲ್ಲಾ ಸದಸ್ಯರ ಆಶಯದಂತೆ ಉಚಿತ ನೋಟ್ ಬುಕ್ ವಿತರಿಸುತಿದ್ದೇವೆ. ಪ್ರತಿಯೊಂದು ಮಗುವ ಮೊದಲ ಕಲಿಕ ಸಮಯದಲ್ಲಿ ಉತ್ತಮ ರೀತಿಯಲ್ಲಿ ಶಿಕ್ಷಣ ನೀಡಿದರೆ ಅವರು ಮುಂದಿನ ದಿನಗಳಲ್ಲಿ ಉನ್ನತ ಮಟ್ಟದ ವ್ಯಕ್ತಿಗಳಾಗುತ್ತಾರೆ ಎಂದು ತಿಳಿಸಿದರು.
ಮುಖ್ಯ ಶಿಕ್ಷಕರಾದ ವೆಂಕಟೇಶ್ ಮಾತನಾಡಿ ಸರ್ಕಾರಿ ಶಾಲಾ ಮಕ್ಕಳನ್ನು ಗುರುತಿಸಿ ಕರ್ನಾಟಕ ಪತ್ರಕರ್ತರ ಸಂಘದ ಪಧಾದಿಕಾರಿಗಳ ಉಚಿತ ನೋಟ್ ಬುಕ್ ,ಪೆನ್ ,ಪೆನ್ಸಿಲ್ ಗಳನ್ನು ವಿತರಣೆ ಮಾಡುತ್ತಿರುವ ಪತ್ರಕರ್ತರ ಸಂಘದ ಕಾರ್ಯಕ್ಕೆ ನಮ್ಮೆಲ್ಲರ ಸಹಕಾರವಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು .
ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಅಮ್ಜಾದ್ ಖಾನ್ ಮಾತನಾಡಿ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಹಾಗಾಗಿ ನಾವೆಲ್ಲರೂ ಬಾಲ್ಯದಿಂದಲೇ ಮಕ್ಕಳನ್ನು ಶೈಕ್ಷಣಿಕವಾಗಿ, ಹಾಗೂ ಸಾಮಾಜಿಕವಾಗಿ ಪ್ರೋತ್ಸಾಹವನ್ನು ನೀಡಬೇಕು. ಬಡ ವಿದ್ಯಾರ್ಥಿಗಳಿಗೆ ಸಮೂಹ ಜೊತೆಯಲ್ಲಿದ್ದರೆ ಅವರ ಜೀವನಕ್ಕೆ ಸಹಾಯವಾಗುತ್ತದೆ ಎಂಬುದು ನಮ್ಮ ಅಭಿಪ್ರಾಯವಾಗಿದೆ. ಪತ್ರಕರ್ತರ ಸಂಘದ ಕಾರ್ಯಕ್ಕೆ ನಮ್ಮೆಲ್ಲರ ಸಹಕಾರವಿದೆ ನಿಮ್ಮ ಸಾಮಾಜಿಕ ಕಳಕಳಿಯ ಕೆಲಸವು ನಿರಂತರವಾಗಿರಲಿ ಎಂದು ತಿಳಿಸಿದರು . ಈ ಕಾರ್ಯಕ್ರಮದಲ್ಲಿ 79 ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಲಾಯಿತು.
ಈಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ಶ್ರೀ ಮತಿ ಮಾಲತಿ,ರುಹುಲ್ಲ , ಪರಿಮಳ ,ಸುಮ ,ಆಶ ,ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶಿವರಾಜು, ರೈತ ಮುಖಂಡರು ಹಾಗೂ ಕರ್ನಾಟಕ ಪತ್ರಕರ್ತರ ಸಂಘದ ಕಾರ್ಯದರ್ಶಿ ಬಸವರಾಜು ,ಸಂಘಟನೆ ಕಾರ್ಯದರ್ಶಿ ಶಾರುಖ್ ಖಾನ್ ,ಖಜಾಂಚಿ ಚೇತನ್ ಕುಮಾರ್ ಎಲ್ ,ಕಾರ್ತಿಕ್ ,ಅಜೀತ್ ಇನ್ನು ಮುಂತಾದವರು ಹಾಜರಿದ್ದರು .