ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ಆನಂದ ಕೆ. ಆದೇಶ
ವಿಜಯಪುರ ಆಗಸ್ಟ್ 9 :ವಿಜಯಪುರ ಮಹಾನಗರ ಪಾಲಿಕೆ 22ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ದಿನಾಂಕ:11-08-2025 ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ದಿನಾಂಕ:11-08-2025ರ ಬೆಳಿಗ್ಗೆ 6 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶಿಸಿದ್ದಾರೆ.
ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿ ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿμÉೀಧಿಸಲಾಗಿದೆ.ಕಲ್ಲುಗಳನ್ನು, ಕ್ಷಾರಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳನ್ನು ಈ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿμÉೀಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ,ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.
ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕದಡುವಂತೆ ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿμÉೀಧಿಸಲಾಗಿದೆ.
ಯಾವುದೇ ವ್ಯಕ್ತಿ ಬಹಿರಂಗವಾಗಿ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೆÇಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರ್ಕಾರ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರಿತ್ಯ ಕ್ರಮ ಜರುಗಿಸಲಾಗುವುದು.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಹೊರತುಪಡಿಸಿ ಮಾರ್ಗಸೂಚಿ-ನಿಯಮಗಳನ್ನು ಪಾಲಿಸುವಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.