ಇಂಡಿ : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಾಳೆ (ಜನವರಿ 21 ) ತಾಲ್ಲೂಕಿನ ಬಳ್ಳೊಳ್ಳಿ ಹೋಬಳಿಯ ಪಡನೂರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧ ಸೇವೆಗಳು/ಯೋಜನೆಗಳಾದ ಖಾತಿ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಸೌಲಭ್ಯ ಅತಿವೃಷ್ಠಿ/ ಪಡಿತರ ಚೀಟಿ, ಪಹಣಿ ಲೋಪದೋಷ ತಿದ್ದುಪಡಿ, ಸೌಲಭ್ಯಗಳನ್ನು ಪಡೆದುಕೊಳ್ಳಬಹುದೆಂದು ತಹಶಿಲ್ದಾರ ನಾಗಯ್ಯ ಹಿರೇಮಠ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.