ಮಹದೇಶ್ವರ ಬೆಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್
ಹನೂರು: ತಾಲೂಕಿನ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹಾಗೂ ಶಾಸಕರಾದ ಎಂ.ಆರ್ ಮಂಜುನಾಥ್ ಎ.ಆರ್. ಕೃಷ್ಣಮೂರ್ತಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಟಿಬಿ ಕವಿತಾ ಜಿಲ್ಲಾಮಟ್ಟದ ಅಧಿಕಾರಿಗಳು ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ನಾಗಮಲೆ ಭವನದಲ್ಲಿ ಸಭೆ ನಡೆಸಿದರು.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಸಚಿವ ವೆಂಕಟೇಶ್ ಮಲೆ ಮಾದೇಶ್ವರನ ದರ್ಶನ ಪಡೆದು ಅಧಿಕಾರಿಗಳ ಸಭೆ ನಡೆಸಿ ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಸಾಮೂಹಿಕ ವಿವಾಹಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿವಿಧ ಸಚಿವರು ಆಗಮಿಸುವ ಹಿನ್ನೆಲೆಯಲ್ಲಿ ಪ್ರತಿವರ್ಷ ನಡೆಯುವ ಸಾಂಪ್ರದಾಯದಂತೆ ಸಾಮೂಹಿಕ ವಿವಾಹ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಲಿರುವ ಮುಖ್ಯಮಂತ್ರಿಗಳು ಸೇರಿದಂತೆ ವಿವಿಧ ಸಚಿವರು ಸಹ ಸಂಚಾಲಕರಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ಕಾರ್ಯಕ್ರಮಗಳ ಯಾವುದೇ ಲೋಪದೋಷಗಳು ಇಲ್ಲದಂತೆ ಸೂಕ್ತ ಕ್ರಮ ಕೈಗೊಳ್ಳುವ ನೆಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು…
ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ : ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಾದ 508 ಕೊಠಡಿಗಳ ಸೇರಿದಂತೆ ದೊಡ್ಡಕೆರೆ ಸುತ್ತಲೂ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಉಪ ಕಾರ್ಯದರ್ಶಿ ಚಂದ್ರಶೇಖರ್ ಹಾಗೂ ತಾಲೂಕು ದಂಡಾಧಿಕಾರಿ ಗುರುಪ್ರಸಾದ್ ,ಕಾರ್ಯನಿರ್ವಾಹಕಾಧಿಕಾರಿ ಮೋನಾ ರೋತ್,ಡಿವೈಎಸ್ಪಿ ಧರ್ಮೇಂದ್ರ ಇಓ ಉಮೇಶ್ ,ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಚಿನ್ನಣ್ಣ, ಸುರೇಂದ್ರ, ಸೇರಿದಂತೆ ಇನ್ನಿತರ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.