ಜಿಲ್ಲಾ ಕಾನಿಪ ಅಧ್ಯಕ್ಷ, ಉಪಾಧ್ಯಕ್ಷರಿಗೆ ಗೌರವ ಸನ್ಮಾನ
ವಿಜಯಪುರ: ತಾಲೂಕಿನ ನಾಗಠಾಣ ಗ್ರಾಮದಲ್ಲಿ ಜರುಗಿದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ ಯಡಳ್ಳಿ, ಉಪಾಧ್ಯಕ್ಷರಾಗಿ ಆಯ್ಕೆಯಾದ ಶಶಿಕಾಂತ ಮೆಂಡೆಗಾರ ಅವರನ್ನು ಹಾಗೂ ಕರುನಾಡು ಪ್ರಭ ಪತ್ರಿಕೆಯ ಸಂಸ್ಥಾಪಕರಾದ ಶರಣು ಮಸಳಿ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಲ್ಲಯಾರೂಢ ಮಠದ ಪ್ರಜ್ಞಾನಂದ ಸ್ವಾಮೀಜಿ, ಗೂಳಪ್ಪ ಪೂಜಾರಿ, ಶರಣಬಸು ಪೂಜಾರಿ, ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ ಕಟಕದೊಂಡ, ನಾಗಠಾಣ ಮತಕ್ಷೇತ್ರದ ಮಾಜಿ ಶಾಸಕ ಎಚ್ ಆರ್ ಆಲಗೂರ, ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ ಅರಕೇರಿ, ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಾ ಗಿರಿಸಾಗರ, ಸಂಸ್ಥೆಯ ಉಪಾಧ್ಯಕ್ಷೆ ಸುರೇಖಾ ಬಂಡೆ, ಕಾರ್ಯದರ್ಶಿ ಸುನಂದಾ ಹುಣಶ್ಯಾಳ,
ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ, ಶಿಕ್ಷಕ ಸಾಹಿತಿ ಸಂತೋಷ ಬಂಡೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.



















