ಸಚೀನ ಇಂಡಿ ಇವರಿಗೆ ಜಿಲ್ಲಾ ಮಾಧ್ಯಮ ರತ್ನ ಪ್ರಶಸ್ತಿ
ಇಂಡಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ ೨೦೨೫ ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಇಂಡಿ ತಾಲ್ಲೂಕಿನ ವರದಿಗಾರ ಸಚೀನ ಎಸ್ ಇಂಡಿ ಅವರು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಜಿಲ್ಲಾ ಅಧ್ಯಕ್ಷ ಮಹಮ್ಮದ್ಯೂಸಿಫ್ ನೇವಾರ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ ಮತ್ತು ಇಂಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಧ್ವನಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಬಿರಾದಾರ ಅವರು ತಿಳಿಸಿದ್ದಾರೆ.
ಜುಲೈ ೨೭ ರವಿವಾರ ವಿಜಯಪೂರ ನಗರದ ಗಾಂಧಿ ಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಸಚೀನ ಎಸ್ ಇಂಡಿ ಇವರಿಗೆ ಜಿಲ್ಲಾ ಮಾಧ್ಯಮ ರತ್ನ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.