5ನೇ ರಾಜ್ಯ ಹಣಕಾಸು ಆಯೋಗದ ಜಿಲ್ಲಾ ಪ್ರವಾಸ ವಿವರ..! ಗೊತ್ತಾ..?
ವಿಜಯಪುರ, ಮೇ.16 : 5ನೇ ರಾಜ್ಯ ಹಣಕಾಸು ಆಯೋಗ ಮೇ.19ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದೆ.
ಆಯೋಗವು ಮೇ.18ರಂದು ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದೆ. ಮೇ.19ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಲಿದೆ.
ಮಧ್ಯಾಹ್ನ 2-30ರಿಂದ 3-30ರವರೆಗೆ ವಿಜಯಪುರ ತಾಲೂಕಿನ ಒಂದು ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ಮಾಡಲಿದೆ. ಮಧ್ಯಾಹ್ನ 4 ರಿಂದ 5 ಗಂಟೆಯವರೆಗೆ ಕೊಲ್ಹಾರ ಪಟ್ಟಣ ಪಂಚಾಯತಿಗೆ ಭೇಟಿ ನೀಡಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ಮಾಡಿ, ಸಂಜೆ 5 ಗಂಟೆಗೆ ಕೊಲ್ಹಾರದಿಂದ ಆಲಮಟ್ಟಿಗೆ ಪ್ರಯಾಣ ಬೆಳೆಸಲಿದೆ ಎಂದು ಪ್ರಕಟಣೆ ತಿಳಿಸಿದೆ.