• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅನ್ನ-ಆಹಾರ, ಧರ್ಮದ ವಿಚಾರದಲ್ಲಿ ʼಶಕಲಕ ಸರ್ಕಸ್ʼ ಮಾಡುವ ಬಿಜೆಪಿಗೆ ನೈತಿಕತೆ ಇದೆಯಾ-ಕುಮಾರಸ್ವಾಮಿ:

      April 3, 2022
      0
      ಅನ್ನ-ಆಹಾರ, ಧರ್ಮದ ವಿಚಾರದಲ್ಲಿ ʼಶಕಲಕ ಸರ್ಕಸ್ʼ ಮಾಡುವ ಬಿಜೆಪಿಗೆ ನೈತಿಕತೆ ಇದೆಯಾ-ಕುಮಾರಸ್ವಾಮಿ:
      0
      SHARES
      968
      VIEWS
      Share on FacebookShare on TwitterShare on whatsappShare on telegramShare on Mail

      VOJ ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಬಿಜೆಪಿ ಸರಕಾರ ಮತಕ್ಕಾಗಿ, ಕುರ್ಚಿಗಾಗಿ ಮಾಡುತ್ತಿರುವ ಸದಾರಮೆ ನಾಟಕ ಜಗಜ್ಜಾಹೀರಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಟ್ವಿಟರ್ ಮೂಲಕ ರಾಜ್ಯ ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡದ್ದಾರೆ ಹೆಚ್ ಡಿ ಕುಮಾರಸ್ವಾಮಿ.

      ತಮ್ಮ ಟ್ವಟ್ಟರ್ ಖಾತೆಯಲ್ಲಿ ಸ್ವಯಂಘೋಷಿತ ದೇಶಭಕ್ತ ಬಿಜೆಪಿ ಪಕ್ಷವೇ. ಕುರ್ಚಿಗಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿಮ್ಮ ಯಾವ ಮುಖಂಡರ ಮನೆ ಬಾಗಿಲಿಗೂ ಬರಲಿಲ್ಲ. ಅಧಿಕಾರಕ್ಕಾಗಿ ಅವರ ಮನೆ ಬಾಗಿಲಿಗೇ ಬಂದರು ನಿಮ್ಮವರು! ನೆನಪಿರಲಿ. ಅಧಿಕಾರಕ್ಕಾಗಿ ಯಡಿಯೂರಪ್ಪನವರೇ ಬಿಜೆಪಿ ಬಿಡಲು ಸಿದ್ಧರಿದ್ದರು. ಮಂತ್ರಿಯಾದರೆ ಸಾಕಪ್ಪಾ ಎಂದು ಕುಮಾರಣ್ಣನ ಮನೆ ಕದತಟ್ಟಿದ್ದರು. ಆದರೆ, ತಾಯಿಯಂಥ ಪಕ್ಷ ಬಿಡಬೇಡಿ ಎಂದು ಸಲಹೆ ನೀಡಿದ್ದರು ಹೆಚ್ಡಿಕೆ. ಅವರಿಗೆ ಪಕ್ಷ ಬಿಡಿ ಎಂದಿದ್ದರೆ ಆವತ್ತೇ ಕರ್ನಾಟಕದಲ್ಲಿ ಬಿಜೆಪಿ ಸಮಾಧಿ ಆಗುತ್ತಿತ್ತು. ಬಿಜೆಪಿಯನ್ನು ಉಳಿಸಿದವರೇ ಕುಮಾರಸ್ವಾಮಿ ಎಂದು ಗುಡುಗಿದ್ದಾರೆ.

      9 ದಿನ ಸಿಎಂ ಆಗಿದ್ದ ಯಡಿಯೂರಪ್ಪಗೆ ಬೆಂಬಲ ಕೊಟ್ಟಿದ್ದು ಇದೇ ಕುಮಾರಸ್ವಾಮಿ. ಆಗ ನಿಮ್ಮ ಹೈಕಮಾಂಡ್, ʼಅಗ್ರಿಮೆಂಟ್ ಹೈ ಡ್ರಾಮಾʼ ಆಡಿ ಯಡಿಯೂರಪ್ಪ ಬೆನ್ನಿಗೆ ತಿವಿದದ್ದು ಗೊತ್ತಿಲ್ಲವಾ? ಕೊನೆಗೆ ಅಗ್ರಿಮೆಂಟನ್ನೇ ಹೈಜಾಕ್ ಮಾಡಿ ವಚನಭ್ರಷ್ಟರಾಗಿದ್ದು ನೀವು. ಅದನ್ನು ಕುಮಾರಸ್ವಾಮಿ ತಲೆಗೆ ಕಟ್ಟಿದಿರಿ. ಸತ್ಯ ಮರೆತರೆ ಹೇಗೆ ? ಕೃತಜ್ಞತೆ ಎನ್ನುವುದು ನಿಮಗೆ ಆಗದ ಪದ. ಯಾರು ಶಕ್ತಿ ತುಂಬುತ್ತಾರೋ ಅವರ ಕತ್ತು ಕುಯ್ಯುವುದು ನಿಮ್ಮ ಜಾಯಮಾನ. 2006ರಲ್ಲಿ ಸರಕಾರ ರಚನೆಯಾದ ಎರಡೇ ತಿಂಗಳಿಗೆ ಕುಮಾರಸ್ವಾಮಿ ವಿರುದ್ಧ ಸಲ್ಲದ ಸುಳ್ಳು ಆರೋಪ ಮಾಡಿ ಬೆನ್ನಿಗಿರಿದದ್ದು ಯಾರು? ಬಿಜೆಪಿಯ ʼಬ್ರೂಟಸ್ ಪಾಲಿಟಿಕ್ಸ್ʼ ಅಲ್ಲವೇ ಅದು?

      ಉಪ ಸಭಾಪತಿ ವಿಷಯಕ್ಕೆ ಬಂದರೆ, ಈ ಸ್ಥಾನಕ್ಕೂ ಕುಮಾರಣ್ಣಗೂ ಸಂಬಂಧವೇ ಇಲ್ಲ. ಆ ಪದವಿ ಆಕಾಂಕ್ಷಿ ಆಗಿದ್ದವರು ಮೂಲತಃ ಜನತಾ ಪರಿವಾರದವರು. ಅವರನ್ನು ಕಾಂಗ್ರೆಸ್ ನಂಬಿಸಿ, ವಂಚಿಸಿತ್ತು. ಅವರಿಗೆ ಜೆಡಿಎಸ್ ಪಕ್ಷ ಆಶ್ರಯ ಕೊಟ್ಟು ಶಕ್ತಿ ತುಂಬಿತು. ಇದರಲ್ಲಿ ಸರ್ಕಸ್ ಪ್ರಶ್ನೆ ಎಲ್ಲಿಂದ ಬಂತು? ಕನ್ನಡದ ನೆಲ-ಜಲ, ನಾಡು-ನುಡಿಗಾಗಿ ಕುಮಾರಸ್ವಾಮಿ ಸರ್ಕಸ್ ಮಾಡುತ್ತಾರೆ, ಸರಿ. ಆದರೆ; ಅನ್ನ-ಆಹಾರ, ಧರ್ಮದ ವಿಚಾರದಲ್ಲೂ ʼಶಕಲಕ ಸರ್ಕಸ್ʼ ಮಾಡುವ ಬಿಜೆಪಿಗೆ ನೈತಿಕತೆ ಎಂಬುದು ಇದೆಯಾ? ಮತಕ್ಕಾಗಿ, ಕುರ್ಚಿಗಾಗಿ ನಿಮ್ಮ ʼಸದಾರಮೆ ನಾಟಕʼ ಜಗಜ್ಜಾಹೀರು. ಕ್ಷಣಕ್ಕೊಂದು ಬಣ್ಣ ಬದಲಿಸುವ ಬಿಜೆಪಿ ಒಂದು ʼರಾಜಕೀಯ ಊಸರವಳ್ಳಿ ಎಂದು ಕಿಡಿಕಾರಿದರು.

      ಕುಮಾರಸ್ವಾಮಿ ಜೀವನ ತೆರೆದ ಪುಸ್ತಕ. ಇದ್ದದ್ದನ್ನು ಕಡ್ಡಿತುಂಡು ಮಾಡಿದಂತೆ ಹೇಳುವ ಎದೆಗಾರಿಕೆ ಅವರಿಗಷ್ಟೇ ಇದೆ ಎಂಬುದು 6.5 ಕೋಟಿ ಜನರಿಗೆ ಗೊತ್ತು. ಅಧಿಕಾರಕ್ಕೆ ಅಂಟಿಕೊಂಡ ಕುಟುಂಬ ಅವರದ್ದಲ್ಲ. ಬೆಂಬಲ ಕೊಡುತ್ತೇವೆ ಎಂದು ವಾಜಪೇಯಿ ನೀಡಿದ ಆಫರನ್ನೇ ತಿರಸ್ಕರಿಸಿ, ಪ್ರಧಾನಿ ಪದವಿ ತೊರೆದ ನಾಯಕರು ದೇವೇಗೌಡರು ಎಂಬುದು ಗೊತ್ತಿಲ್ಲವೇ? ಕುಮಾರಸ್ವಾಮಿ ಅವರೇನೋ ಲಕ್ಕಿಡಿಪ್ ಸಿಎಮ್ಮು ಎಂಬುದೇನೋ ಸರಿ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕಾದರೆ ಎಲ್ಲಿದ್ದಿರಿ ನೀವು? ಕುರ್ಚಿ ಹಿಡಿಯಲು ಈ ಲಕ್ಕಿಡಿಪ್ ಸಿಎಂ ಕಾಲೇ ಹಿಡಿಯಬೇಕಾಯಿತು. ಅದನ್ನು ಮರೆತರೆ ಹೇಗೆ? ಸತ್ಯಕ್ಕೆ ಸಮಾಧಿ ಕಟ್ಟುವುದು ಎಂದರೆ ಬಿಜೆಪಿಗೆ ಸುಲಭದ ಕೆಲಸ.

      ಅಧಿಕಾರ ಬಂದಾಗ ಗೌಡರ ಕುಟುಂಬ ಬೊಕ್ಕಸ ಲೂಟಿ ಮಾಡಲಿಲ್ಲ. 2 ಅವಧಿಯಲ್ಲಿ ಬಿಜೆಪಿ ಸರಕಾರ ನಡೆಸಿದ ಭ್ರಷ್ಟಲೀಲೆಗಳು ಅನೇಕ? ಭ್ರಷ್ಟಸುಳಿಗೆ ಸಿಲುಕಿ ಸಿಎಂ ಜೈಲಿಗೆ ಹೋದ ಇತಿಹಾಸ ನಿಮ್ಮದು. ಸಾಲುಸಾಲು ಜೈಲುಪಕ್ಷಿಗಳು ನಿಮ್ಮವರೇ. ನಿಮ್ಮ ಶಾಸಕರೇ ಸಿಎಂ ವಿರುದ್ಧ ಭ್ರಷ್ಟ ಆರೋಪ ಮಾಡಿದಾಗ, ಅವರನ್ನು ಮನೆಗೆ ಕಳಿಸಿದ ʼಹೀನ ಚರಿತ್ರೆʼ ನಿಮ್ಮದು. ಈಗಷ್ಟೇ ರಾಜ್ಯದಾದ್ಯಂತ ಮಾರ್ದನಿಸುತ್ತಿರುವ 40% ಕಮೀಷನ್ ಕಥೆ ಏನು? ಪ್ರಧಾನಮಂತ್ರಿಗಳಿಗೇ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಬರೆದ ಪತ್ರ, ಬೆಳಗಾವಿ ಗುತ್ತಿಗೆದಾರರೊಬ್ಬರು ಬರೆದ ಪತ್ರ, ಸಚಿವರ ಮೇಲೆ ನೇರ ಪರ್ಸಂಟೇಜ್ ಆರೋಪ.. ಇದೆಲ್ಲ ಬಿಜೆಪಿಯ ಭ್ರಷ್ಟಕಾಂಡಗಳು. ಇದು ನಿಮ್ಮವರ ಜಾತಕ.

      2 ಸಲ ರಚಿಸಿದ ಸರಕಾರಕ್ಕೆ ಹಣ ಎಲ್ಲಿನದು? ಜನರತೆರಿಗೆ ಹಣವನ್ನು ಕೊಳ್ಳೆ ಹೊಡೆದದ್ದು ಅಲ್ಲವೇ? ಶಾಸಕರನ್ನು ಬಜಾರಿನಲ್ಲಿ ಬಿಕರಿ ವಸ್ತುಗಳಂತೆ ಖರೀದಿ ಮಾಡಿದ ಬಿಜೆಪಿಯ ʼಅಪರೇಷನ್ ಕಮಲʼ ನಿಮ್ಮ ಅನೈತಿಕತೆಯ ಪರಾಕಾಷ್ಠೆ. ದೆಹಲಿಯಲ್ಲಿ ಸಂಸತ್ ಭವನಕ್ಕೆ ನಮಸ್ಕಾರ, ಬೆಂಗಳೂರಿನಲ್ಲಿ ಶಾಸಕರ ವ್ಯಾಪಾರ!! ಇದಾ ಹಿಂದುತ್ವ? ಇದಾ ಪ್ರಜಾಪ್ರಭುತ್ವ? ಎಂದರು. ಬಿಜೆಪಿ ಬಣ್ಣ ಬಿಚ್ಚಿಡುತ್ತಾ ಹೋದರೆ, ಮನುಕುಲದ ಈವರೆಗಿನ ಕ್ರೂರ-ಪೈಶಾಚಿಕ ಇತಿಹಾಸ ಮೀರಿಸುತ್ತದೆ. ಅಧಿಕಾರಕ್ಕಾಗಿ ನಡೆಸಿದ ʼನರಹಂತಕ ರಾಜಕಾರಣʼವು ಸಮಸ್ತ ಭಾರತೀಯರಿಗೆಲ್ಲ ಗೊತ್ತಿದೆ. ಮತಕ್ಕಾಗಿ ಡ್ರಾಮಾ ಯಾರದ್ದು ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಾ? ನಿತ್ಯವೂ ನಿಮ್ಮ ನಾಟಕಗಳ ಹೊಸ ಅಂಕಗಳು ಬಿಚ್ಚಿಕೊಳ್ಳುತ್ತಲೇ ಇವೆಯಲ್ಲ! ನಿಮ್ಮ ಬಾಲಂಗೋಚಿಗಳ ಗುತ್ತಿಗೆಯಲ್ಲ ಹಿಂದುತ್ವ. ಮುಗ್ಧ ಜನರಿಗೆ ಧರ್ಮದ ಹೆಸರಿನಲ್ಲಿ ವಿಷವುಣಿಸುತ್ತಿರುವ ನಿಮ್ಮದು ಹಿಂದುತ್ವವೇ? ಮಾನವ ವಿಕಾಸವನ್ನೇ ಮರೆತು ಮನುಜಕುಲಕ್ಕೇ ʼಮರಣಶಾಸನʼ ಬರೆಯುತ್ತಿರುವ ರಾಜಕಾರಣ ನಿಮ್ಮದು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದರೆ ಇದೇನಾ? ಅದು, ಸಬ್ ಕಾ ವಿನಾಶ್ ಮತ್ತು ಸಬ್ ಕಾ ಸರ್ವ ನಾಶ್.

      ಹಿಂದುತ್ವ ಎಂದರೆ ದಿವ್ಯ ಪರಂಪರೆ, ಶ್ರೇಷ್ಠ ನಂಬಿಕೆ, ಪಾವನ ಶ್ರದ್ಧೆ. ಎಲ್ಲರನ್ನೂ ಒಳಗೊಳ್ಳುವ ಪರಮೋತ್ಕೃಷ್ಟ ಆದರ್ಶ. ʼನಿಮ್ಮ ಹಿಂದುತ್ವʼ ಇದಕ್ಕೆ ತದ್ವಿರುದ್ಧ. ಗಾಂಧೀಜಿಯನ್ನು ಕೊಂದವರು, ಬ್ರಿಟೀಷರಿಗೆ ಪರಿಚಾರಿಕೆ ಮಾಡಿದವರು, ಶೂದ್ರರನ್ನು ಹೊಸಕಿ ಹಾಕಿದವರು ಈಗ ಹಿಂದುತ್ವದ ಜಪ ಮಾತನಾಡುತ್ತಿರುವುದು ಈ ಶತಮಾನದ ಬಹುದೊಡ್ಡ ಜೋಕ್ ಎಂದು ಗುಡುಗಿದ್ದಾರೆ.

      Tags: #bjp circus party#hd kumaraswami tweet#vote banking drama
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.