ವಿಜಯಪುರ : ಅನುಮಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಡೆದಿದೆ. ವಿಜಯಪುರದ ಗುಮಾಸ್ತೆ ಕಾಲೋನಿ ನಿವಾಸಿ ಶಂಬುಲಿಂಗ ದುಂಡಪ್ಪ ರೇವಡಿಗಾರ ಎಂಬುವವರ ಶವ ಪತ್ತೆಯಾಗಿದೆ. ಇನ್ನು ಇದು ಕೊಲೆಯೋ ಅಥವಾ ಸಹಜ ಸಾವೋ ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.