ವಿಜಯಪುರ : ವರದಕ್ಷಿಣೆ ಖಿನ್ನತೆ ಹಿನ್ನಲೆ ಮಹಿಳೆ ಬಾವಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಎಸ್ಪಿ ಎಚ್‌ಡಿ ಆನಂದಕುಮಾರ ಮಾಹಿತಿ ನೀಡಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಮಾಯಮ್ಮ ಜೊತಗೊಂಡ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಗಂಡ ಸೇರಿದಂತೆ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಅದಕ್ಕಾಗಿ ಇದಕ್ಕೆ ಬೇಸತ್ತು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಆರೋಪಿಗಳ ಬಂಧನಕ್ಕೆ ಒಂದು ತಂಡ ರಚನೆ ಮಾಡಲಾಗಿದೆ. ಆದಷ್ಟು ಬೇಗನೆ ಆರೋಪಿಗಳ ಬಂಧನ ಮಾಡಲಾಗುವುದು ಎಂದರು.