ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ
ವಿಜಯಪುರ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ 2016ರ ಬ್ಯಾಚ್ನ ಐಎಎಸ್ ಅಧಿಕಾರಿ ಡಾ.ಆನಂದ ಕೆ ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದರು.
ವಿಜಯಪುರ ನಿರ್ಗಮಿತ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ನೂತನ ಜಿಲ್ಲಾಧಿಕಾರಿಗಳಿಗೆ ಬರ ಮಾಡಿಕೊಂಡು, ಹೂಗುಚ್ಛ ನೀಡಿ ಸ್ವಾಗತಿಸಿ, ಅಧಿಕಾರ ಹಸ್ತಾಂತರಿಸಿದರು. ಜನರಲ್ ಮೆಡಿಸಿನ್ ವಿಭಾಗದಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವೈದ್ಯಕೀಯ ಪದವಿ ಪಡೆದಿರುವ ಇವರು, ಕಳೆದ 2 ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿರುವ ಡಾ.ಆನಂದ ಕೆ ಅವರು ವಿಜಯಪುರ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆಯಾಗಿದ್ದಾರೆ.