ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಮೀಕ್ಷೆಯಿಂದ ಒಂದೇ ಒಂದು ಕುಟುಂಬವು ಹೊರಗುಳಿಯದಂತೆ ನೋಡಿಕೊಳ್ಳಬೇಕು
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಕಾರ್ಯೆದ ಗಣತಿದಾರರು ಮತ್ತು ಮೇಲ್ವಿಚಾರಕರ ತಾಲ್ಲೂಕಾ ಮಟ್ಟದ ತರಬೇತಿ ಕಾರ್ಯಗಾರಕ್ಕೆ ಚಾಲನೆ.
ಮುದ್ದೇಬಿಹಾಳ ; ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಮೀಕ್ಷೆಯಿಂದ ಒಂದೇ ಒಂದು ಕುಟುಂಬವು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ತಹಶಿಲ್ದಾರ ಬಲರಾಮ ಕಟ್ಟಿಮನಿ ಹೇಳಿದರು ಅವರು ಶನಿವಾರ ಪಟ್ಟಣದ ಅಭ್ಯುದಯ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಆಡಳಿತ ಸಮಾಜ ಕಲ್ಯಾಣ ತಾಲೂಕ ಪಂಚಾಯತಿ ಶಿಕ್ಷಣ ಇಲಾಖೆಯಿಂದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಕಾರ್ಯೆದ ಗಣತಿದಾರರು ಮತ್ತು ಮೇಲ್ವಿಚಾರಕರ ತಾಲ್ಲೂಕ ಮಟ್ಟದ ತರಬೇತಿ ಕಾರ್ಯಗಾರಕ್ಕೆ ಚಾಲನೆಯನ್ನು ನೀಡಿ ಮಾತನಾಡಿದರು ಸಮೀಕ್ಷೆ ಕಾರ್ಯ ಮೇ 5 ರಿಂದ ಆರಂಭಗೂಳ್ಳಲಿದ್ದು ಸಂಬಂಧಿಸಿದ ಎಲ್ಲರೂ ಕುಟುಂಬದ ಜಾತಿ ಮತ್ತು ಇತರೆ ಮಾಹಿತಿಯನ್ನು ಗಣತಿದಾರರಿಗೆ ನಿಖರವಾಗಿ ನೀಡಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಬಸಂತಿ ಮಠ ಬಿಇಒ ಬಿ ಎಸ್ ಸಾವಳಗಿ ಮಾತನಾಡಿ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆಯು 3 ಹಂತಗಳಲ್ಲಿ ಕೈಗೊಳ್ಳಲಾಗುತ್ತಿದೆ. ಸಮೀಕ್ಷೆದಾರರು ಮನೆ-ಮನೆ ಭೇಟಿ ನೀಡಿ ಸಮೀಕ್ಷೆಯನ್ನು ಮೇ 5ರಿಂದ ಮೇ 17ರ ವರೆಗೆ ಬೆಳಗ್ಗೆ 8ರಿಂದ ಸಂಜೆ 6.30ರ ವರೆಗೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆ ಕೈಗೊಳ್ಳಬೇಕು. ಸಮೀಕ್ಷೆ ಬ್ಲಾಕ್‌ಗಳಲ್ಲಿ ವಿಶೇಷ ಶಿಬಿರ ಕೈಗೊಂಡು, ಮನೆ-ಮನೆ ಭೇಟಿ ಅವಧಿಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಮೇ 19 ರಿಂದ ಮೇ 21ರ ವರೆಗೆ ಸಂಗ್ರಹಿಸಬೇಕು. ಮೇ 19ರಿಂದ ಮೇ 23ರ ವರೆಗೆ ಕಡ್ಡಾಯವಾಗಿ ಆಧಾರ್ ನಂಬರ್ ಹಾಗೂ ರೇಷನ ಕಾರ್ಡ್ ನಂಬರ್‌ನೊಂದಿಗೆ ಸ್ವಯಂ ಘೋಷಣೆ (ಆನ್‌ಲೈನ್)ಯನ್ನು ಸಲ್ಲಿಸಬೇಕು ,ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಮೀಕ್ಷೆಯಿಂದ ಒಂದೇ ಒಂದು ಕುಟುಂಬವು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.
ಕಾರ್ಯಾಗಾರದಲ್ಲಿ ಎಸ್ ಆರ್ ಪಾಟೀಲ್ ಒಳಮೀಸಲಾತಿ ಆಯೋಗದ ಅನುಷ್ಠಾನ ಕರ್ನಾಟಕ ಪರಿಶಿಷ್ಟ ಜಾತಿ ಸಮೀಕ್ಷೆ ಹಿನ್ನೆಲೆ ಕುರಿತು ಸಮಗ್ರ ಮಾಹಿತಿ ನೀಡಿದರು
ಎಂ.ಬಿ ಗುಡಗುಂಟಿ ಸಮೀಕಾದಾರರ ಜವಾಬ್ದಾರಿಗಳು ಮತ್ತು ಸಮೀಕ್ಷೆ ಆಪ್ ಮಾಹಿತಿ ಒದಗಿಸಿದರು, ಆಯ್ ಇ ಸಿ ಸಂಯೋಜಕ ಪರಮೇಶ ಹೊಸಮನಿ ಸಮೀಕ್ಷೆ ಆಪ್ ಪ್ರಾಯೋಗಿಕ ತರಬೇತಿ ನೀಡಿದರು ಈ ವೇಳೆ ಪ್ರಶ್ನೋತ್ತರ ವೇಳೆ ಕೈಪಿಡಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸರಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂಘದ ತಾಲೂಕಾ ಅಧ್ಯಕ್ಷ ಬಿ ಹೆಚ್ ಮುದ್ನೂರ, ಕ್ಷೇತ್ರ ಸಮನ್ವಯಧಿಕಾರಿ ಯು ಬಿ ಧರಿಕಾರ ವೇದಿಕೆಯಲ್ಲಿದ್ದರು, ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್ ಗಳು ಭಾಗವಹಿಸಿದ್ದರು. ಸಿ ಆರ್ ಪಿ ಜಿ .ಆರ್ ಚವ್ಹಾಣ ನಿರೂಪಿಸಿ ವಂದಿಸಿದರು.