ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ..!
ವಿಜಯಪುರ : ಉಕ್ಕಲಿ ಗ್ರಾಮ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ 3:58 ಕ್ಕೆ ಲಘು ಭೂಕಂಪನವಾಗಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮ ವ್ಯಾಪ್ತಿಯಲ್ಲಿ ಲಘು ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.8 ತಿವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.
ಭೂಕಂಪನದಿಂದ ಭಯ ಬೀತರಾಗಿ ಹೋರಗೆ ಓಡಿ ಬಂದೆವು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.


















