ವಿಜಯಪುರ : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಡಿಎಸ್ಎಸ್ ನವರು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ಇನ್ನು ರಾಜ್ಯ ಸರ್ಕಾರ, ಶಿಕ್ಷಣ ಸಚಿವ ನಾಗೇಶ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಬರಗೂರು ರಾಮಚಂದ್ರಪ್ಪನವರ ಅಧ್ಯಕ್ಷತೆಯ ಪಠ್ಯ ಪುಸ್ತಕಗಳನ್ನು ಶಾಲೆಗೆ ಒದಗಿಸಬೇಕು. ಇನ್ನು ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಸೇರಿದಂತೆ 10ಕ್ಕೂ ಹೆಚ್ಚು ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.